Sunday, 15th December 2024

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್’ಗೆ ಗಾಯ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟ ವಿಜಯ್‌ ಶನಿವಾರ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ವಿಜಯ್ ಅವರ ಮೆದುಳಿನ ಬಲಭಾಗ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗಿದೆ.

ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಗೆ ತಂದಾಗಲೇ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಕ್ಯಾನ್​ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ, ಅವರಿಗೆ ಮೆದುಳಿನ ಆಪರೇಷನ್ ನೆರವೇರಿಸಲಾಗಿದೆ. ಸಧ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು ಎಂದು ಚಿಕಿತ್ಸೆ ನೀಡಿದ ವೈದ್ಯ ನ್ಯೂರೋ ಸರ್ಜನ್ ಡಾ. ಅನಿಲ್​ ಕುಮಾರ್ ಹೇಳಿದ್ದಾರೆ.