Thursday, 12th December 2024

ಹಿರಿಯ ನಟ ಶಿವರಾಮ್ ಖಾಸಗಿ ಅಸ್ಪತ್ರೆಗೆ ದಾಖಲು

#SandalwodoActor
ಬೆಂಗಳೂರು: ಚಂದನವನದ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ.

3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರ ವಾಗಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ.

”ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದು ವರೆದಿದೆ” ಎಂದು ರವಿಶಂಕರ್ ಹೇಳಿದ್ದಾರೆ.