Thursday, 12th December 2024

ಸ್ಯಾಂಡಲ್’ವುಡ್ ನಟ ರಾಕ್ ಲೈನ್ ಸುಧಾಕರ್ ನಿಧನ

ಬೆಂಗಳೂರು: ಚಿತ್ರೀಕರಣದಲ್ಲಿ ತೊಡಗಿದ್ದ ಹಿರಿಯ ಸ್ಯಾಂಡಲ್ ವುಡ್ ನಟ ರಾಕ್ ಲೈನ್ ಸುಧಾಕರ್ ಅವರು ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.

ಪೋಷಕ ಮತ್ತು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದ ಸುಧಾಕರ್ ಅವರು ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಚಿತ್ರದ ಕುರುಡನ ಪಾತ್ರದಲ್ಲಿ ಗಮನ ಸೆಳೆದಿದ್ದರು. ಇತ್ತೀಚೆಗೆ ರಾಕ್ ಲೈನ್ ಸುಧಾಕರ್ ಅವರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ನಂತರ ಸೋಂಕಿನಿಂದ ಗುಣಮುಖರಾದ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಇಂದು ಕೂಡಾ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು ಸೆಟ್ ನಲ್ಲಿ ಕುಸಿದು ಬಿದ್ದು ನಿಧನ ಹೊಂದಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಈ ಬಗ್ಗೆ ಟ್ವೀಟ್ಟರ್ ನಲ್ಲಿ ಖಚಿತಪಡಿಸಿದ್ದಾರೆ.

ಪಂಚರಂಗಿ, ಡ್ರಾಮಾ, ಅಜಿತ್, ಉಡುಂಬಾ, ಟೋಪಿವಾಲಾ, ಜೂಮ್, ಚಮಕ್, ಪಟಾಕಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ನಟ ಸುಧಾಕರ್ ಪತ್ನಿ ಹಾಗೂ ಪುತ್ರನನ್ನ ಅಗಲಿದ್ದಾರೆ.