ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sangeeth Sagar Death: ಸಿನಿಮಾ ಶೂಟಿಂಗ್‌ ವೇಳೆಯೇ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

Sandalwood Director Sangeeth Sagar:‌ ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು.

ಸಿನಿಮಾ ಶೂಟಿಂಗ್‌ ವೇಳೆ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

ನಿರ್ದೇಶಕ ಸಂಗೀತ್‌ ಸಾಗರ್ -

ಹರೀಶ್‌ ಕೇರ
ಹರೀಶ್‌ ಕೇರ Dec 4, 2025 8:41 AM

ಬೆಂಗಳೂರು, ಡಿ.04: ಸಿನಿಮಾ ಚಿತ್ರೀಕರಣ (cinema shooting) ವೇಳೆ ಹೃದಯಾಘಾತದಿಂದ (Heart attack) ಸ್ಯಾಂಡ್‌ವುಡ್ ನಿರ್ದೇಶಕ‌, ಸಂಗೀತ ನಿರ್ದೇಶಕ ಸಂಗೀತ್‌ ಸಾಗರ್‌ (Director Sangeeth Sagar) ಅವರು ಸಾವನ್ನಪ್ಪಿದ್ದಾರೆ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್‌ ಸಾಗರ್‌ ಅವರು ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್‌ ಹೇಳಿದ್ದರು. ಆ ವೇಳೆಗಾಗಲೇ ಸುಸ್ತಾಗಿ ಸಂಗೀತ್‌ ಸಾಗರ್‌ ಕುಸಿದಿದ್ದರು.

‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು. 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ನಾಳೆ ಕುಂಬಳಕಾಯಿ ಶಾಸ್ತ್ರ ಮಾಡಿ ಕೊನೆಯ ಚಿತ್ರೀಕರಣ ಮಾಡಬೇಕಿತ್ತು.

ಸ್ಕೂಟರ್ ರಿಪೇರಿಗಾಗಿ ತೆರಳುತ್ತಿದ್ದಾಗ ಹೃದಯಾಘಾತ: ಕುಸಿದು ಬಿದ್ದು ಸಾವು