Friday, 22nd November 2024

Sandalwood News: ಅಂಡಮಾನ್-ನಿಕೋಬಾರ್‌ ದ್ವೀಪದಲ್ಲಿ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಚಿತ್ರತಂಡ

Sandalwood News

ಬೆಂಗಳೂರು: ತನ್ನ ಕ್ಯಾಚಿ ಟೈಟಲ್‌ನಿಂದಲೇ ಗಾಂಧಿನಗರದ ಸಿನಿಮಾ ಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದ ಚಿತ್ರ ʼಚೌಕಿದಾರ್ʼ (Chowkidar). ಶ್ರೀಮುರಳಿ ಅಭಿನಯದ ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದ ಈ ಚಿತ್ರದ ಅಂಗಳದಿಂದ ಹೊಸ ಅಪ್‌ಡೇಟ್ ಸಿಕ್ಕಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಇಳಿದಿದ್ದ ಚಿತ್ರತಂಡವೀಗ 53 ದಿನಗಳ ಕಾಲ ಚಿತ್ರೀಕರಣ ಮುಗಿಸಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ʼಚೌಕಿದಾರ್ʼ ಸಿನಿಮಾವನ್ನು 10 ದಿನಗಳ ಕಾಲ ಚಿತ್ರೀಕರಿಸಲಾಗಿದೆ (Sandalwood News).

ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ʼಚೌಕಿದಾರ್ʼ ಸಿನಿಮಾವನ್ನು ಅಷ್ಟೇ ಅದ್ಧೂರಿಯಾಗಿ ನಿರ್ಮಿಸಲಾಗುತ್ತಿದೆ. ಅದರಂತೆ ಚಿತ್ರತಂಡ ಅಂಡಮಾನ್-ನಿಕೋಬರ್ ದ್ವೀಪದಲ್ಲಿ ಚಿತ್ರೀಕರಣ ನಡೆಸಿದೆ. ಶಿವಣ್ಣ ನಟನೆಯ ʼಅಂಡಮಾನ್ʼ ಸಿನಿಮಾದ ಶೂಟಿಂಗ್ ಈ ಜಾಗದಲ್ಲಿ ಆಗಿತ್ತು. ಈ ಚಿತ್ರ ಹೊರತುಪಡಿಸಿ ಮತ್ಯಾವುದೆ ಕನ್ನಡ ಸಿನಿಮಾಗಳ ಶೂಟಿಂಗ್ ನಡೆದಿರಿಲ್ಲ. ಇದೀಗ ʼಚೌಕಿದಾರ್ʼ ಅಂಡಮಾನ್-ನಿಕೋಬರ್ ದ್ವೀಪದಲ್ಲಿ ಬರೋಬ್ಬರಿ 10 ದಿನಗಳ ಕಾಲ ಹಾಡು ಹಾಗೂ ಚಿತ್ರದ ಕೆಲ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿದಿರುವುದು ವಿಶೇಷ. ಒಟ್ಟಾರೆ 53 ದಿನಗಳ ಕಾಲ ಚಿತ್ರೀಕರಣ ನಡೆಯಲಿರುವ ʼಚೌಕಿದಾರ್ʼ ಸಿನಿಮಾದ ಮೊದಲ ಹಂತ ಪೂರ್ತಿಯಾಗಿದೆ.

ಅಂಡಮಾನ್-ನಿಕೋಬರ್ ದ್ವೀಪದಲ್ಲಿ ನಡೆದ ಚಿತ್ರೀಕರಣದಲ್ಲಿ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ, ನಾಯಕ ಪೃಥ್ವಿ ಅಂಬಾರ್, ನಾಯಕಿ ಧನ್ಯ ರಾಮ್ ಕುಮಾರ್, ಹಿರಿಯ ಕಲಾವಿದರಾದ ಸಾಯಿಕುಮಾರ್, ನೃತ್ಯ ಸಂಯೋಜಕ ಮುರುಳಿ ಮಾಸ್ಟರ್ ಹಾಗೂ ಸೌತ್ ಇಂಡಿಯಾದ ಕೆಲ ಟೆಕ್ನಿಷಿಯನ್ ಭಾಗಿಯಾಗಿದ್ದರು.

ಪೃಥ್ವಿ ಅಂಬಾರ್ ಇಲ್ಲಿವರೆಗೂ ಪ್ರೀತಿ-ಪ್ರೇಮ ಕಥಾ ಹಂದರದ ಚಿತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಲವರ್ ಬಾಯ್ ಆಗಿಯೇ ಅಭಿನಯಿಸಿದ್ದಾರೆ. ಆದರೆ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಈ ʼಚೌಕಿದಾರ್ʼ ಚಿತ್ರದಲ್ಲಿ ಪೃಥ್ವಿ ಅಂಬಾರ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಕಥಾಹಂದರವನ್ನು ಅವರು ಆಯ್ಕೆ ಮಾಡಿಕೊಂಡಿದ್ದು, ಹೊಸ ರೂಪದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.

‘ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆಯುತ್ತಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದೆ.

ಈ ಸುದ್ದಿಯನ್ನೂ ಓದಿ: Sandalwood News: ಧನ್ವೀರ್ ನಟನೆಯ ‘ಹಯಗ್ರೀವ’ ಚಿತ್ರದ ಪೋಸ್ಟರ್ ರಿಲೀಸ್‌