ಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್ ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಹಾಗೂ ಯುವ ನಟ ಸಂತೋಷ್ ಬಾಲರಾಜ್ (Actor Santhosh Balaraj) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾಂಡೀಸ್‌ನಿಂದ ಬಳಲುತ್ತಿರುವ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಫೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
34 ವರ್ಷದ ನಟ ಸಂತೋಷ್ ಅವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್‌ಗೆ ಕರಿಯ ಸಿನಿಮಾ ನಿರ್ಮಾಣ ಮಾಡಿದ್ದರು. ಜಾಂಡೀಸ್ ಉಲ್ಬಣಗೊಂಡು, ಗಂಭೀರ ಸ್ಥಿತಿಯಲ್ಲಿದ್ದ ಸಂತೋಷ್ 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಇವರು ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Hikora Movie: ನೀನಾಸಂ ಕಿಟ್ಟಿ ನಿರ್ದೇಶಿಸಿ, ನಟಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಔಟ್