Wednesday, 11th December 2024

ಸಿಸಿಬಿ ವಿಚಾರಣೆಗೆ ಹಾಜರಾದ ಸಂಜನಾ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 15 ದಿನಗಳಿಗೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಸಂಜನಾ ಇಂದು ಸಿಸಿಬಿ ಕಚೇರಿಗೆ ಹಾಜರಾಗಿದ್ದು, ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಸಂಜನಾ ವಿಚಾರಣೆ ನಡೆಸಿ ದ್ದಾರೆ.