ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಎಂಟನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ಮನೆಯೊಳಗೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಈ ಮೊದಲು ಲಾಯರ್ ಜಗದೀಶ್ ಹೊರಹೋದ ಬೆನ್ನಲ್ಲೆ ಸಿಂಗರ್ ಹನುಮಂತ ಅವರು ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿದ್ದರು. ಇದೀಗ ಮನೆಯಲ್ಲಿದ್ದ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಲು ಇಬ್ಬರು ಸಖತ್ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಎಂಟ್ರಿಯಾಗಿದೆ.
ಶೋಭಾ ಶೆಟ್ಟಿ ಮತ್ತು ರಂಜಿತ್ ಬುಜ್ಜಿ ಅವರು ಈ ಬಾರಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇದರಲ್ಲಿ ಶೋಭಾ ಅವರಿಗೆ ಬಿಗ್ ಬಾಸ್ ಹೊಸದೇನೂ ಅಲ್ಲ. ಈ ಹಿಂದೆ ತೆಲುಗು ಬಿಗ್ಬಾಸ್ ಸೀಸನ್ 7 ರಲ್ಲಿ ಇವರು ಭಾಗಿಯಾಗಿದ್ದರು. ಅಲ್ಲಿ ತಮ್ಮ ಜಗಳ, ಮಾತುಗಳ ಮೂಲಕವೇ ಜನಪ್ರಿಯ ಆಗಿದ್ದರು.
ಸುದೀಪ್ ಅವರು ಶೋಭಾ ಅವರನ್ನು ಮನೆಯೊಳಗೆ ಕಳುಹಿಸುವ ಮುನ್ನ ಯಾರು ನಿಮಗೆ ಟಫ್ ಅನಿಸುವ ಕಂಟೆಸ್ಟೆಂಟ್ ಅಂತ ಹೇಳಿದ್ದಾರೆ. ಅದಕ್ಕೆ ಶೋಭಾ ಶೆಟ್ಟಿ ಅವರು ಯಾರು ಇಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ವ್ಲಾಗರ್ ಸಹ ಆಗಿರುವ ಶೋಭಾ ಶೆಟ್ಟಿ ಯೂಟ್ಯೂಬ್ ಚಾನೆಲ್ ಹೊಂದಿದ್ದು ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ವಿಡಿಯೋ ಮಾಡಿ ವ್ಲಾಗ್ ರೂಪದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಕನ್ನಡದಲ್ಲಿ ಅಗ್ನಿ ಸಾಕ್ಷಿ ಹಾಗೂ ನಮ್ಮ ರುಕ್ಕು ಧಾರಾವಾಹಿಯಲ್ಲಿ ನಟಿಸಿದ್ದರು.
ಇನ್ನು ರಂಜಿತ್ ಅವರು ನಟರಾಗಿದ್ದು, ಕಿರುತೆರೆ ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. 2013ರಲ್ಲಿ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮೂಲಕ ಜನರಿಗೆ ಪರಿಚಯವಾದ ರಜತ್, ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿ ಬ್ಯುಸಿನೆಸ್ ನೋಡಿಕೊಳ್ಳುತ್ತಿದ್ದಾರೆ. ರಜತ್ ಕೆಲವು ದಿನಗಳ ಹಿಂದೆ ದರ್ಶನ್-ರೇಣುಕಾಸ್ವಾಮಿ ಘಟನೆ ಬಗ್ಗೆ ಧ್ವನಿ ಎತ್ತಿದ್ದರು.
ಅನುಷಾ ರೈ ಎಲಿಮಿನೇಟ್: ಏಳನೇ ವಾರ ಮನೆಯಿಂದ ಹೊರಹೋಗಲು ಹತ್ತು ಸದಸ್ಯರು ನಾಮಿನೇಟ್ ಆಗಿದ್ದರು. ಇದೀಗ ಅಚ್ಚರಿ ಎಂಬಂತೆ ಅನುಷಾ ರೈ ತಮ್ಮ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ. ಇತರೆ ಸ್ಪರ್ಧಿಗಳಿಗೆ ಹೋಲಿಸಿಕೊಂಡರೆ ಅನುಷಾ ರೈ ಅವರು ಮನೆಯಲ್ಲಿ ತುಸು ಕಡಿಮೆ ಗಮನ ಸೆಳೆದಿದ್ದರು.