The Devil Movie: ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್
The Devil Movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ನಟ ದರ್ಶನ್, ಜೈಲಿನಿಂದ ಬಿಡುಗಡೆಯಾದ ಬಳಿಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುವ ತಯಾರಿಯಲ್ಲಿ ಇದ್ದಾರೆ. ಈ ನಡುವೆ ದಾಸನ ಫ್ಯಾನ್ಸ್‌ಗೆ ʼದಿ ಡೆವಿಲ್ʼ (The Devil Movie) ಚಿತ್ರತಂಡದಿಂದ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್ ಅವರ ಹೊಸ ಚಿತ್ರದ ಬಗ್ಗೆ ಅಪ್ಡೇಟ್ ಹಂಚಿಕೊಂಡಿದೆ. ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ. ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ ʼದಿ ಡೆವಿಲ್ʼ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.
ದರ್ಶನ್ ಅವರಿಗೆ ನಾಯಕಿಯಾಗಿ ರಚನಾ ರೈ ಅಭಿನಯಿಸುತ್ತಿದ್ದಾರೆ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ಸುದ್ದಿಯನ್ನೂ ಓದಿ | Actor Darshan: ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್ ಭೇಟಿ; ಶತ್ರು ಸಂಹಾರಕ್ಕಾಗಿ ವಿಶೇಷ ಪೂಜೆ
ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್

ಬೆಂಗಳೂರು: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ ʼಮುಂಗಾರು ಮಳೆʼ ಚಿತ್ರದ ನಂತರ ಇದೇ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ʼಮನದ ಕಡಲುʼ ಚಿತ್ರ (Manada Kadalu Movie) ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ ʼಮನದ ಕಡಲುʼ ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.
ಈ ಸುದ್ದಿಯನ್ನೂ ಓದಿ | Junk Jewel Fashion: ಸೀಸನ್ ಫಂಕಿ ಲುಕ್‌ಗೆ ಜಂಕ್ ಜ್ಯುವೆಲರಿ ಸಾಥ್