ಮುಂಬೈ/ನವದೆಹಲಿ: ಗಾಯಕಿ ಶ್ರೇಯಾ ಘೋಷಾಲ್ ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿ ಯನ್ನ ಗಾಯಕಿ ಸೋಶಿ ಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ದೇವರ ಆಶೀರ್ವಾದದಿಂದ ಗಂಡು ಮಗು ಜನಿಸಿದೆ. ಇಂತಹ ಸಂತಸವನ್ನ ಹಿಂದೆಂದೂ ಅನುಭವಿಸಿರಲಿಲ್ಲ. ಪತಿ ಶಿಲಾದಿತ್ಯ ಹಾಗೂ ನಮ್ಮ ಕುಟುಂಬ ಸ್ಥರು ಸಂತೋಷಗೊಂಡಿದ್ದೇವೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಶ್ರೇಯಾ ಘೋಷಾಲ್ ಹಾಗೂ ಶಿಲಾದಿತ್ಯ ಮುಖ್ಯೋಪಾಧ್ಯಾಯ 2015ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. 10 ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ ಈ ಜೋಡಿ ಬಳಿಕ ವೈವಾಹಿಕ ಜೀವನಕ್ಕೆ ಕಾಲಿ ಟ್ಟಿತ್ತು.