Thursday, 12th December 2024

ಸುಶಾಂತ್ ಸಿಂಗ್ ತಂದೆ ಆಸ್ಪತ್ರೆಗೆ ದಾಖಲು

ಹರಿಯಾಣ: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ತಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಕೆ ಸಿಂಗ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದು, ಹರಿಯಾಣದ ಫರಿದಾಬಾದ್ ನ ಆಸ್ಪತ್ರೆಗೆ ದಾಖಲಾಗಿ ದ್ದಾರೆ. ಅವರ ಜೊತೆ ಇಬ್ಬರು ಹೆಣ್ಣು ಮಕ್ಕಳು ಆಸ್ಪತ್ರೆಯಲ್ಲಿದ್ದು,ತಂದೆಯ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ಜೂನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಕೆ ಸಿಂಗ್ ಅವರು ಆಸ್ಪತ್ರೆಯಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಆಘಾತಗೊಂಡಿದ್ದಾರೆ. ಆದಷ್ಟು ಬೇಗ ಹುಷಾ ರಾಗಿ ಎಂದು ಹರಸಿದ್ದಾರೆ.