Saturday, 14th December 2024

ಜೀವಿಯವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾದಂತಾಗಿದೆ: ಸುನೀಲ್ ಪುರಾಣಿಕ್

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಿಘಂಟು ತಜ್ಞ, ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರೊ.ಜೀವಿ ಎಂದೇ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಖ್ಯಾತರಾದ ಶತಾಯುಷಿ ವೆಂಕಟಸುಬ್ಬಯ್ಯ ಅವರು, ಈ ನಾಡು ಕಂಡ ಅಪ್ರತಿಮ ವಿದ್ವಾಂಸರು. ಕನ್ನಡ ಶಬ್ದಕೋಶದ ಮೇಲೆ ಅವರಿಗಿದ್ದ ಅಸಾಧಾರಣ ಪಾಂಡಿತ್ಯದಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಅಭಿಮಾನಿಗಳನ್ನು , ಶಿಷ್ಯವೃಂದವನ್ನು ಹೊಂದುವಂತೆ ಮಾಡಿತ್ತು.

ದೇಶದ ಅತ್ಯನ್ನತ ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದ ಜೀವಿಯವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾದಂತಾಗಿದೆ. ನಡೆದಾಡುವ ನಿಘಂಟು ಎಂದೇ ಹೆಸರಾಗಿದ್ದ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪುರಾಣಿಕ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.