ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್ಚಂದ್ರ ಅವರು ಶುಕ್ರವಾರ ಮಧ್ಯಾಹ್ನ ಮೃತ ಪಟ್ಟಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್ಚಂದ್ರ ಅವರು, ಚಂದನವನದ ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್, ದೇವರಾಜ್ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಟ, ನಿರ್ದೇಶಕ ಎಸ್.ನಾರಾಯಣ್ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ ಕಾಣಿಸಿಕೊಂಡ ಸುರೇಶ್ಚಂದ್ರ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.