Kota Srinivasa Rao: ಹಿರಿಯ ಚಿತ್ರನಟ ಕೋಟಾ ಶ್ರೀನಿವಾಸ ರಾವ್ ನಿಧನ
Kota Srinivasa Rao: ಕೋಟಾ ಶ್ರೀನಿವಾಸ್ ಅವರು ಖಳನಾಯಕ, ಪೋಷಕರ ಪಾತ್ರ ಹಾಗೂ ಹಾಸ್ಯನಟನಾಗಿ ತೆಲುಗು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಕೋಟ ಶ್ರೀನಿವಾಸ ರಾವ್ 4 ದಶಕಗಳ ಕಾಲ ಸಿನಿಮಾ ಮೂಲಕ ಪ್ರೇಕ್ಷರನ್ನು ರಂಜಿಸಿದ್ದಾರೆ. 9 ರಾಜ್ಯ ನಂದಿ ಪ್ರಶಸ್ತಿಗಳು, ಕೃಷ್ಣಂ ವಂದೇ ಜಗತ್ ಗುರು ಚಿತ್ರಕ್ಕಾಗಿ SIIMA ಪ್ರಶಸ್ತಿ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.

ಕೋಟಾ ಶ್ರೀನಿವಾಸ ರಾವ್

ತೆಲಂಗಾಣ: ಟಾಲಿವುಡ್ ಚಿತ್ರರಂಗದ ಖ್ಯಾತ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ (83) (kota srinivasa rao) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟಾ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಲನಚಿತ್ರ ಗಣ್ಯರು ಹಾಗೂ ನಟ-ನಟಿಯರು ಖ್ಯಾತ ನಟ ಕೋಟ ಶ್ರೀನಿವಾಸ ರಾವ್ ನಿಧನ ಸಂತಾಪ ಸೂಚಿಸಿದ್ದಾರೆ.
ಕೋಟ ಶ್ರೀನಿವಾಸ ರಾವ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಗನ ಮರಣದ ನಂತರ ಅವರು ಮಾನಸಿಕವಾಗಿ ತುಂಬಾ ಖಿನ್ನತೆಗೆ ಒಳಗಾಗಿದ್ದರು. ಕೋಟಾ ಶ್ರೀನಿವಾಸ್ ಅವರು ಖಳನಾಯಕ, ಪೋಷಕರ ಪಾತ್ರ ಹಾಗೂ ಹಾಸ್ಯನಟನಾಗಿ ತೆಲುಗು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು.
750ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೋಟಾ ಶ್ರೀನಿವಾಸ್ ರಾವ್ ನಟಿಸಿದ್ದಾರೆ. ನಟನ ನಿಧನಕ್ಕೆ ಚಲನಚಿತ್ರ ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ. ರಂಗಭೂಮಿಯಿಂದ ಬಂದ ನಟ ಕೋಟಾ ಶ್ರೀನಿವಾಸ್ ತಮ್ಮದೇ ಆದ ನಟನಾ ಶೈಲಿಯಿಂದ ಜನರ ಮನಸ್ಸು ಗೆದ್ದಿದ್ರು. ವಿಶೇಷವಾಗಿ ನಟ ಬಾಬು ಮೋಹನ್ ಅವರೊಂದಿಗೆ ಅವರು ಸುಮಾರು 60 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರಿಬ್ಬರ ಹಾಸ್ಯ ಸಮಯಪ್ರಜ್ಞೆ ವೀಕ್ಷಕರಿಗೆ ಇಷ್ಟವಾಗ್ತಿತ್ತು.
ಜುಲೈ 10, 1942 ರಂದು ಕೃಷ್ಣ ಜಿಲ್ಲೆಯ ಕಂಕಿಪಾಡುವಿನಲ್ಲಿ ಕೋಟಾ ಶ್ರೀನಿವಾಸ್ ರಾವ್ ಜನಿಸಿದರು. ಸಿನಿಮಾ ಇಂಡಸ್ಟ್ರಿ ಪ್ರವೇಶಿಸುವ ಮೊದಲು, ಅವರು ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಚಲನಚಿತ್ರಗಳಿಗೆ ಪ್ರವೇಶಿಸುವ ಮೊದಲು, ಅವರು 20 ವರ್ಷಗಳ ಕಾಲ ವೇದಿಕೆಯಲ್ಲಿ ನಟನೆಯಲ್ಲಿ ಅನುಭವವನ್ನ ಪಡೆದ್ರು. ಚಲನಚಿತ್ರಗಳಿಗೆ ಪದಾರ್ಪಣೆ ಮಾಡಿದ ಕೋಟ ಶ್ರೀನಿವಾಸ ರಾವ್, ತಮ್ಮ ವಿಶಿಷ್ಟ ಶೈಲಿಯ ಹಾಸ್ಯದ ಮೂಲಕ ಪ್ರೇಕ್ಷಕರನ್ನು ಮೆಚ್ಚಿಸಿದರು.
1978ರಲ್ಲಿ ಚಿರಂಜೀವಿ ಅವರ ಮೊದಲ ಚಿತ್ರ 'ಪ್ರಾಣಮ್ ಖರೀಧು' ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ರು. ನಾಲ್ಕೂವರೆ ದಶಕಗಳ ಕಾಲ ತಮ್ಮ ವೃತ್ತಿಜೀವನದಲ್ಲಿ, ನೂರಾರು ಚಿತ್ರಗಳಲ್ಲಿ ಖಳನಾಯಕ ಮತ್ತು ಪೋಷಕ ಪಾತ್ರಗಳನ್ನು ನಿರ್ವಹಿಸುವ ಮೂಲಕ ಖ್ಯಾತಿ ಗಳಿಸಿದ್ರು. ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಕೋಟ ಶ್ರೀನಿವಾಸ ರಾವ್ 4 ದಶಕಗಳ ಕಾಲ ಸಿನಿಮಾ ಮೂಲಕ ಪ್ರೇಕ್ಷರನ್ನು ರಂಜಿಸಿದ್ದಾರೆ. 9 ರಾಜ್ಯ ನಂದಿ ಪ್ರಶಸ್ತಿಗಳು, ಕೃಷ್ಣಂ ವಂದೇ ಜಗತ್ ಗುರು ಚಿತ್ರಕ್ಕಾಗಿ SIIMA ಪ್ರಶಸ್ತಿ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಬೆಳ್ಳಿ ಪರದೆಯ ಮೇಲೆ ತಮ್ಮ ಛಾಪು ಮೂಡಿಸಿದ್ದ ಕೋಟ ಶ್ರೀನಿವಾಸ ರಾವ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ಇಡೀ ಚಿತ್ರರಂಗ ಆಘಾತಗೊಂಡಿದೆ. ತೆಲುಗಿನ ಜೊತೆಗೆ ಅವರು ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿಯೂ ನಟಿಸಿದ್ದಾರೆ. 1978 ರಲ್ಲಿ ಪ್ರಣಮ್ ಖರಿಧು ಚಿತ್ರದ ಮೂಲಕ ಅವ್ರು ಚಲನಚಿತ್ರ ಜಗತ್ತಿಗೆ ಪ್ರವೇಶಿಸಿದರು.