ಬೆಂಗಳೂರು: ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ (The Devil Movie) ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ರಾಜಸ್ಥಾನ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಮಾತಿನ ಜೋಡಣೆ (ಡಬ್ಬಿಂಗ್) ಆರಂಭವಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳ ಮೂಲಕ ಎಲ್ಲರ ಗಮನ ಸೆಳೆದಿರುವ ʼದಿ ಡೆವಿಲ್ʼ ಚಿತ್ರದ ಮತ್ತೊಂದು ವಿಭಿನ್ನ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ದರ್ಶನ್ ಅವರ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ ʼದಿ ಡೆವಿಲ್ʼ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ. ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.
ಈ ಸುದ್ದಿಯನ್ನೂ ಓದಿ | Summer Season End Sale: ಸೀಸನ್‌ಗೂ ಮುನ್ನವೇ ಆರಂಭವಾಯ್ತು ಸಮ್ಮರ್ ಎಂಡ್ ಸೇಲ್
ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.