ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಜೈಲಿನಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖದೊಂದಿಗೆ ದಾಸನ ʼದರ್ಶನʼ, ನಗುಮೊಗದಲ್ಲಿ ಪವಿತ್ರಾ ಗೌಡ!

Actor Darshan: ನಟ ದರ್ಶನ್ ತೂಗುದೀಪ ಈ ಹಿಂದೆ ಜೈಲಿನಲ್ಲಿದ್ದಾಗ ವಿಗ್ ಧರಿಸಿಕೊಂಡಿದ್ದರು. ಆಗ ಪ್ರತಿಬಾರಿ ಅವರನ್ನು ಭೇಟಿಯಾಗಲು ಮನೆಯವರು ಜೈಲಿಗೆ ಹೋದಾಗ ವಿಗ್ ಹಾಕಿಕೊಂಡೇ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇದೀಗ ಜೈಲಿನೊಳಗೆ ಹೋಗುವ ಮುನ್ನ ನಟ ದರ್ಶನ್ ಅವರು ನಿಜರೂಪದಲ್ಲಿ ಕಾಣಿಸಿಕೊಂಡಿದ್ದಾರೆ.

ಜೈಲಿನಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖದೊಂದಿಗೆ ದಾಸನ ʼದರ್ಶನʼ!

Prabhakara R Prabhakara R Aug 16, 2025 7:59 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಪುನಃ ಜೈಲು ಸೇರಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಇವರನ್ನು ಕಳುಹಿಸುವ ಮುನ್ನಾ ತೆಗೆದಿದ್ದ ಫೋಟೊಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಫೋಟೋದಲ್ಲಿ ನಟ ದರ್ಶನ್‌ (Actor Darshan) ಬೋಳು ತಲೆ, ಸುಕ್ಕುಗಟ್ಟಿದ ಮುಖ ಹಾಗೂ ಬಿಳಿಗಡ್ಡದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ ಅವರ ಗೆಳತಿ ಪವಿತ್ರಾ ಗೌಡ ಮಾತ್ರ ನಗುಮುಖದಲ್ಲಿರುವುದು ಕಂಡುಬಂದಿದೆ.

ನಟ ದರ್ಶನ್ ತೂಗುದೀಪ ಈ ಹಿಂದೆ ಜೈಲಿನಲ್ಲಿದ್ದಾಗ ವಿಗ್ ಧರಿಸಿಕೊಂಡಿದ್ದರು. ಆಗ ಪ್ರತಿಬಾರಿ ಅವರನ್ನು ಭೇಟಿಯಾಗಲು ಮನೆಯವರು ಜೈಲಿಗೆ ಹೋದಾಗ ವಿಗ್ ಹಾಕಿಕೊಂಡೇ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇದೀಗ ಜೈಲಿನೊಳಗೆ ಹೋಗುವ ಮುನ್ನ ನಟ ದರ್ಶನ್ ಅವರು ನಿಜರೂಪದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ನಟಿ ಪವಿತ್ರಾ ಗೌಡ ಅವರು ಹಸನ್ಮುಖರಾಗಿಯೇ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಲು ಹೋದಾಗ ಮನೆಯಲ್ಲಿ ಮೇಕಪ್ ಮಾಡಿಕೊಂಡು ಅವರು ಹೊರಗೆ ಬಂದಿದ್ದರು. ಈ ವಿಚಾರವಾಗಿಯೂ ಅವರು ಟೀಕೆಗೆ ಗುರಿಯಾಗಿದ್ದರು. ಇದೀಗ ಅವರು ಜೈಲಿನಲ್ಲಿ ಫೋಟೊಗೆ ನಗುತ್ತಲೇ ಪೋಸ್‌ ನೀಡಿರುವುದು ಕಂಡುಬಂದಿದೆ.

ʼದಿ ಡೆವಿಲ್‌ʼ ಚಿತ್ರಕ್ಕೆ ಸಂಪೂರ್ಣ ಸಹಕಾರ; ಪತಿ ದರ್ಶನ್‌ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮೀ

Vijayalkshmi

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಮತ್ತೆ ಜೈಲು ಸೇರಿದ್ದಾರೆ. ಇದರಿಂದ ಅವರ ಅಭಿಮಾನಿಗಳಿ ಆಘಾತಕ್ಕೀಡಾಗಿದ್ದಾರೆ. ದರ್ಶನ್‌ ಅಭಿನಯದ ʼದಿ ಡೆವಿಲ್‌ʼ (The Devil) ಚಿತ್ರದ ಬಿಡುಗಡೆ ಹೊಸ್ತಿಲಿನಲ್ಲೇ ಅವರ ಜಾಮೀನು ರದ್ದಾಗಿರುವುದು ತೀವ್ರ ನಿರಾಸೆ ತಂದಿದೆ. ಇದೀಗ ದರ್ಶನ್‌ ಅವರ ಸಂದೇಶವನ್ನು ಪತ್ನಿ ವಿಜಯಲಕ್ಷ್ಮೀ (Vijayalkshmi) ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʼದಿ ಡೆವಿಲ್‌ʼ ಚಿತ್ರಕ್ಕೆ ತಮ್ಮೆಲ್ಲ ಸಹಕಾರ ಇದೆ ಎಂದು ದರ್ಶನ್‌ ತಿಳಿಸಿದ್ದಾರೆ.

ʼʼನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.

ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ . ಹಾಗಾಗಿ ನನ್ನ ʼದಿ ಡೆವಿಲ್ʼ ಚಿತ್ರದ ಎಲ್ಲ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ದೃಢವಾಗಿ ನಂಬಿದ್ದೇನೆ.

ಸಿನಿಮಾ ಒಂದು ಮನರಂಜನೆಯ ಮಾಧ್ಯಮ. ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು-ನಿಮ್ಮ ಪ್ರೀತಿಯ ದಾಸ ಎಂದು ವಿಜಯಲಕ್ಷ್ಮೀ ಬರೆದುಕೊಂಡಿದ್ದಾರೆ. ಮೂಲಗಳ ಪ್ರಕಾರ ಪ್ರಕಾಶ್‌ ನಿರ್ದೇಶನದ ʼದಿ ಡೆವಿಲ್‌ʼ ಚಿತ್ರದ ಶೂಟಿಂಗ್‌ ಮತ್ತು ಡಬ್ಬಿಂಗ್‌ ಅನ್ನು ದರ್ಶನ್‌ ಪೂರ್ಣಗೊಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್‌ 15ರಂದು ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಬೇಕಿತ್ತು. ಆದರೆ ದರ್ಶನ್‌ ಮತ್ತೆ ಜೈಲಿಗೆ ಹೋಗಿದ್ದರಿಂದ ಇದನ್ನು ಮುಂದೂಡಲಾಗಿದೆ.

ಈ ಸುದ್ದಿಯನ್ನೂ ಓದಿ: Actor Darshan: ದರ್ಶನ್‌ ಜೈಲಿಗೆ, ಪತ್ನಿ ವಿಜಯಲಕ್ಷ್ಮಿಯಿಂದ ಒಡೆದ ಹೃದಯದ ಪೋಸ್ಟ್‌