ದೇಶಾದ್ಯಂತ ಸಂಚಲನ ಮೂಡಿಸಿದ ಈ ಚಿತ್ರವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ. ಸತತ ನಾಲ್ಕನೇ ವಾರವೂ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿದೆ. ಒಂದಷ್ಟು ಕಡೆಗಳಲ್ಲಿ ಚಿತ್ರವನ್ನು ಉಚಿತವಾಗಿ ತೋರಿಸುವ ಕೆಲಸ ಆಗಿದೆ. ಮೈಸೂರಿನಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ 215 ಮಹಿಳೆಯರಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಮೈಸೂರಿನ ಐನಾಕ್ಸ್ ಮಲ್ಟಿಪ್ಲೆಕ್ಸ್ನಲ್ಲಿ ಪ್ರದರ್ಶನ ಏರ್ಪಡಿಸಲಾಗಿತ್ತು.
ಹಿಂದೂ ಪರ ಸಂಘಟನೆಗಳು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಬೆಂಬಲ ಸೂಚಿಸಿವೆ. ವಿಶ್ವ ಹಿಂದೂ ಪರಿಷತ್ ವತಿ ಯಿಂದ ಮೈಸೂರಿನಲ್ಲಿ ಆಯೋಜಿಸ ಲಾಗಿದ್ದ ಪ್ರದರ್ಶನದಲ್ಲಿ ನೂರಾರು ಮಹಿಳೆಯರು ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ‘ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಸನಾತನ ಧರ್ಮಕ್ಕೆ ಜೈ’ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಗಿದೆ.
‘ದಿ ಕೇರಳ ಸ್ಟೋರಿ’ ಸಿನಿಮಾ 25 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡು, ಮುನ್ನುಗ್ಗುತ್ತಿದೆ. ಮೇ 5ರಂದು ಈ ಚಿತ್ರ ಬಿಡುಗಡೆ ಆಯಿತು.