Saturday, 9th December 2023

ಹಿರಿಯ ನಟಿ ವಹೀದಾ ರೆಹಮಾನ್​’ಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್​ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಜೀವಮಾನ ಶ್ರೇಷ್ಠ ಸಾಧನೆಗೆ ಈ ಗೌರವ ನೀಡಲಾಗುತ್ತದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಷಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್ Xನಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಟ್ವೀಟ್​ ಮಾಡಿರುವ ಸಚಿವರು, “ನಟಿ ವಹೀದಾ ರೆಹಮಾನ್ ಅವರಿಗೆ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಘೋಷಿಸಲು ಬಹಳ ಸಂತೋಷವಾಗುತ್ತಿದೆ. ಗೌರವದ ಕ್ಷಣ” ಎಂದು ಬರೆದಿದ್ದಾರೆ.

ಮಹಿಳಾ ಮೀಸಲಾತಿ ಕಾಯ್ದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ವಹೀದಾ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅನುರಾಗ್ ಅವರು ಕಾಕತಾಳೀಯತೆಯನ್ನು “fitting tribute” ಎಂದು ಬಣ್ಣಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!