Thursday, 12th December 2024

ಆಗಸ್ಟ್ 24 ರಂದು ನಟ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ವಿವಾಹ

ಹೈದರಾಬಾದ್: ಟಾಲಿವುಡ್ ನ ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ಆಗಸ್ಟ್ 24 ರಂದು ಇಟಲಿಯಲ್ಲಿ  ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಇತ್ತೀಚೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಸದ್ಯ ಜೋಡಿ ಹಕ್ಕಿಗಳು ವಿದೇಶಕ್ಕೆ ಹಾರಿದ್ದು, ಭಾವಿ ಪತ್ನಿ ಜೊತೆ ವರುಣ್ ಕಾಫಿ ಡೇಟ್ ಮಾಡ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ವೇಕೆಷನ್‌ಗೆ ವರುಣ್ ಸಹೋದರಿ ನಿಹಾರಿಕಾ ಕೂಡ ಸಾಥ್ ನೀಡಿದ್ದಾರೆ.

2017ರಲ್ಲಿ ತೆರೆಕಂಡ ಮಿಸ್ಟರ್ ಸಿನಿಮಾದಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ಒಟ್ಟಿಗೆ ನಟಿಸಿದ್ದರು. ಆ ಬಳಿಕ ಇಬ್ಬರೂ ಕ್ಲೋಸ್ ಆಗಿದ್ದಾರೆ. ಆರಂಭದಲ್ಲಿ ಸ್ನೇಹಿತರಾಗಿದ್ದ ವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂ’ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.