Wednesday, 11th December 2024

ಏಪ್ರಿಲ್ 7ರಂದು ‘ವೀರಂ’ ಸಿನಿಮಾ ರಿಲೀಸ್

ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಸಿನಿಮಾ ರಿಲೀಸ್ ಗೆ ಸಜ್ಜಾಗಿದೆ.

ಕೊನೆಯ ಹಂತದ ಶೂಟಿಂಗ್ನಲ್ಲಿ ನಿರತವಾಗಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಏಪ್ರಿಲ್ 7ರಂದು ಈ ಚಿತ್ರ ರಾಜ್ಯದ್ಯಂತ ತೆರೆಕಾಣಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.

ಖದರ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ಡಿಂಪಲ್ ಕ್ವೀನ್ ರಚಿತಾ ರಾಮ್, ಶ್ರೀನಗರ ಕಿಟ್ಟಿ, ಹಾಗೂ ಶೃತಿ, ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಶಶಿಧರ್ ಕೆ ಎಂ ನಿರ್ಮಾಣ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.