ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijay Deverakonda: ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ- ರೌಡಿಬಾಯ್‌ಗೆ ಕೀರ್ತಿ ಸುರೇಶ್ ನಾಯಕಿ!

Vijay Deverakonda New Movie launched: ವಿಜಯ್ ದೇವರಕೊಂಡ ಇತ್ತೀಚೆಗೆ ಮಾಡಿದ ಸಿನಿಮಾಗಳಿಗೆ ಸೋಲಿನ ಮೇಲೆ ಸೋಲುಗಳು ಎದುರಾಗುತ್ತಲೇ ಇವೆ. ಆದರೆ ಇದೀಗ ಅವರ ಹೊಸ ಸಿನಿಮಾದ ಮುಹೂರ್ತ ಸಂಭ್ರಮ ನೆರವೇರಿದೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ..

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Deverakonda) ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದ್ದು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು.ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕ್ಟ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ವಿಜಯ್ ದೇವರಕೊಂಡ ಇತ್ತೀಚೆಗೆ ಮಾಡಿದ ಸಿನಿಮಾಗಳಿಗೆ ಸೋಲಿನ ಮೇಲೆ ಸೋಲುಗಳು ಎದುರಾಗುತ್ತಲೇ ಇವೆ. ಆದರೆ ಇದೀಗ ಅವರ ಹೊಸ ಸಿನಿಮಾದ ಮುಹೂರ್ತ ಸಂಭ್ರಮ ನೆರವೇರಿದೆ.ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ (Keerthy Suresh) ಸಾಥ್ ಕೊಡಲಿದ್ದಾರೆ.

ಇದನ್ನೂ ಓದಿ:Kanakaraja Movie: ಸ್ಯಾಂಡಲ್‌ವುಡ್‌ಗೆ ಅನೂಪ್‍ ರೇವಣ್ಣ ರೀ ಎಂಟ್ರಿ; ʼಕನಕರಾಜʼ ಚಿತ್ರಕ್ಕೆ ಮುಹೂರ್ತ

ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16 ರಿಂದ ಚಿತ್ರೀಕರಣ ಪ್ರಾರಂಭ ವಾಗಲಿದ್ದು, ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇನ್ನಷ್ಟು ಸಿನಿಮಾದ ಮಾಹಿತಿ ಚಿತ್ರತಂಡ ಮುಂದಿನ ದಿನದಲ್ಲಿ ಬಿಡುಗಡೆ ಮಾಡಲಿದೆ.