ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

X&Y Movie: ಟ್ರೈಲರ್‌ನಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ʼX&Yʼ ಚಿತ್ರ ಜೂ.26ಕ್ಕೆ ರಿಲೀಸ್‌

X&Y Movie: ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ. ಈ ಕುರಿತ ವಿವರ ಇಲ್ಲಿದೆ.

ʼX&Yʼ ಚಿತ್ರದ ಟ್ರೈಲರ್‌ ರಿಲೀಸ್‌

Profile Siddalinga Swamy Jun 16, 2025 4:11 PM

ಬೆಂಗಳೂರು: ʼರಾಮಾ ರಾಮಾ ರೇʼ ಖ್ಯಾತಿಯ ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರ (X&Y Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೈಲರ್‌ ಬಿಡುಗಡೆಯಾಗಿದ್ದು, ಟ್ರೈಲರ್‌ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದಾರೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೈಲರ್‌ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ. ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ʼX&Yʼ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ.



ಬೃಂದಾ ಆಚಾರ್ಯ, ಡಿ. ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ ʼX&Yʼ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಸುದ್ದಿಯನ್ನೂ ಓದಿ | Monsoon Fashion 2025: ಮಾನ್ಸೂನ್‌ನಲ್ಲಿ ಟ್ರೆಂಡಿಯಾದ ಬಣ್ಣಬಣ್ಣದ ಲಾಂಗ್ ಸ್ಲಿಮ್ ಫಿಟ್ ಬ್ಲೇಜರ್ ಫ್ಯಾಷನ್

X&Y Movie: ʼರಾಮಾ ರಾಮಾ ರೇʼ ನಿರ್ದೇಶಕರ ಮತ್ತೊಂದು ವಿಭಿನ್ನ ಪ್ರಯತ್ನ ‘X&Y’; ಸತ್ಯಪ್ರಕಾಶ್ ಚಿತ್ರ ಶೀಘ್ರದಲ್ಲೇ ತೆರೆಗೆ

ಬೆಂಗಳೂರು: ʼರಾಮಾ ರಾಮಾ ರೇʼ ಖ್ಯಾತಿಯ ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರವನ್ನು (X&Y Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಸಿನಿಮಾತಂಡ ನಡೆಸಿದೆ. ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್‌ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ʼX&Yʼ, ಡಿ. ಸತ್ಯಪ್ರಕಾಶ್ ನಿರ್ದೇಶನದ 4ನೇ ಚಿತ್ರ.

ಈ ಮೊದಲು ʼರಾಮಾ ರಾಮಾ ರೇʼ, ʼಒಂದಲ್ಲಾ ಎರಡಲ್ಲಾʼ ಮತ್ತು ʼಮ್ಯಾನ್ ಆಫ್ ದಿ ಮ್ಯಾಚ್ʼ ಚಿತ್ರಗಳನ್ನು ಡಿ. ಸತ್ಯಪ್ರಕಾಶ್ ನಿರ್ದೇಶಿಸಿದ್ದು, ಈ 3 ಸಿನಿಮಾಗಳು ಭಿನ್ನ ಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ‌‌.

ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ. ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರು ʼX&Yʼ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಸುದ್ದಿಯನ್ನೂ ಓದಿ | Monsoon Lipsticks 2025: ಮಾನ್ಸೂನ್‌ಗೆ ಕಾಲಿಟ್ಟ ವೈವಿಧ್ಯಮಯ ವಾಟರ್ ಪ್ರೂಫ್ ಲಿಪ್‌ಸ್ಟಿಕ್ಸ್