ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ghaati movie: ಅನುಷ್ಕಾ ಶೆಟ್ಟಿ ʼಘಾಟಿʼ ಫಿಲಂ ಮೂಲಕ ಚಿತ್ರ ವಿತರಕಿಯಾದ ಯಶ್‌ ತಾಯಿ ಪುಷ್ಪಾ

Yash: ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ತೆರೆಕಂಡ ʼಕೊತ್ತಲವಾಡಿʼ (Kotthalawadi) ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar), ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ (Anushka Shetty) ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼಘಾಟಿʼ ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ.

ಸೆಪ್ಟೆಂಬರ್ 5 ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ʼಫಾಟಿʼ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: Yash Mother v/s Deepika Das: ಪೋಸ್ಟ್ ಮೂಲಕ ಯಶ್ ತಾಯಿ ಪುಷ್ಪಾಗೆ ಟಾಂಗ್ ನೀಡಿದ ನಟಿ ದೀಪಿಕಾ ದಾಸ್!

ಹರೀಶ್‌ ಕೇರ

View all posts by this author