Friday, 24th March 2023

ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲು ಆಸ್ಪದ ಕೊಡಬೇಡಿ : ಯಡಿಯೂರಪ್ಪ ಮನವಿ

ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಬೀದರ್‌ನಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕರೋನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕರೋನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಆಸ್ಪದ ಕೊಡಬೇಡಿ ಎಂದು ಮನವಿ ಮಾಡಿದರು.

ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಮುನ್ನ ಹೇಳಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ಮಾಡಲು ಸಾರ್ವಜನಿಕರು ಅವಕಾಶ ನೀಡಬಾರದೆಂದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

error: Content is protected !!