Friday, 18th June 2021

ಸೋಂಕು ದೃಢ: ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಬಿಎಸ್’ವೈಗೆ ಚಿಕಿತ್ಸೆ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೋನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಯಡಿಯೂರಪ್ಪ ಅವರು 2ನೇ ಬಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಕಳೆದ ಬಾರಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

“ಮುಖ್ಯಮಂತ್ರಿಗಳು, ನಮ್ಮ ನಾಯಕರೂ, ರೈತ ಹೋರಾಟಗಾರ ಬಿ.ಎಸ್ ಯಡಿಯೂರಪ್ಪರವರಿಗೆ ಕರೋನಾ ಪಾಸಿಟಿವ್ ಎಂಬ ವಿಚಾರವನ್ನು ಮಾಧ್ಯಮಗಳ ಮೂಲಕ ತಿಳಿದೆ. ರಾಜ್ಯದ ಏಳಿಗೆಗಾಗಿ ಶ್ರಮಿಸುತ್ತಿರುವ ಮುಖ್ಯಮಂತ್ರಿಗಳು ಶೀಘ್ರವಾಗಿ ಗುಣಮುಖ ರಾಗಿ ಮತ್ತೇ ಜನಸೇವೆಗೆ ಮರುಳುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಜ್ವರ ಮತ್ತು ಕೋವಿಡ್ ಪಾಸಿಟಿವ್‍ನಿಂದ ಬಳಲುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಶುಭ ಹಾರೈಸಿದ್ದಾರೆ.

ಕರೋನಾ ಸೋಂಕು ಪೀಡಿತರಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಕರೋನಾದಿಂದ ಚೇತರಿಸಿಕೊಂಡು ಎಂದಿನಂತೆ ಆಡಳಿತದಲ್ಲಿ ಸಕ್ರಿಯರಾಗುವಂತೆ ಭಗವಂತನಲ್ಲಿ ಕೋರು ತ್ತೇನೆ ಎಂದು ಮಾಜಿ ಸಿಎಂ ಎಚ್ಡಿಕೆ ಶುಭ ಹಾರೈಸಿದ್ದಾರೆ.

ಕೊರೊನಾ ವೈರಸ್ ಸೋಂಕಿನಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಉತ್ತಮ ಆರೋಗ್ಯಕ್ಕೆ ಮರಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶುಭ ಹಾರೈಕೆ ತಿಳಿಸಿದ್ದಾರೆ.

“ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟಿರುವುದು ತಿಳಿದುಬಂದಿದೆ. ಮುಖ್ಯಮಂತ್ರಿಗಳು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಆಡಳಿತದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಗೋವಿಂದ್ ಕಾರಜೋಳ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಶೀಘ್ರ ಅವರು ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

 

Leave a Reply

Your email address will not be published. Required fields are marked *