Thursday, 23rd March 2023

ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ

ಬೆಂಗಳೂರು: ದಿವಂಗತ ನಟ ಸಾಸಹಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಗಳವಾರ ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಷ್ಣುವರ್ಧನ ಅವರ 70ನೇ ವರ್ಷದ ಹುಟ್ಟುಹಬ್ಬದ, ವಿಶೇಷ ಸಂದರ್ಭದಲ್ಲಿ ದಿವಂಗತ ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ”ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು.

ಚಿತ್ರರಂಗಕ್ಕೆ ರಾಜ್‍ಕುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ವಿಷ್ಣುವರ್ಧನ್ ಅವರು ಸಹ ಸೇರಿದ್ದಾರೆ. ಸತತವಾಗಿ 38 ವರ್ಷಗಳ ಕಾಲ, ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸಿ ನಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ.

“ನಾಗರಹಾವು”ಸಿನಿಮಾದಿಂದ “ಆಪ್ತರಕ್ಷಕ”ಸಿನಿಮಾವರೆಗಿನ, ಅವರ ಸಾಧನೆಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ ಎಂದರು.
ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಷ್ಣುವರ್ಧನ್ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣ ವಾಗಿದೆ ಎಂದು ಬಿಎಸ್ವೈ ಹೇಳಿದರು

error: Content is protected !!