Tuesday, 17th May 2022

ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2021ರ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ.

ಮೈಸೂರಿನ ಕೋಟೆ ಆಂಜನೇಯ ದೇಗುಲದ ಎದುರು ಸಿಎಂ ಬೊಮ್ಮಾಯಿ ನಂದಿಧ್ವಜ ಸ್ತಂಭಕ್ಕೆ 4:30 ರಿಂದ 4:46ರ ಶುಭ ಮೀನ ಲಗ್ನದಲ್ಲಿ ಪೂಜೆ ಸಲ್ಲಿಸಿದರು. ಸಂಸದ ಪ್ರತಾಪ್ ಸಿಂಹ, ಸಚಿವ ಎಸ್.ಟಿ. ಸೋಮಶೇಖರ್, ಮೈಸೂರು ಮೇಯರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿಎಂ, ಈಗಾಗಲೇ ನಂದಿಧ್ವಜ ಸ್ತಂಭಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಲಾಗಿದೆ. ನಾಡಿನ ಜನತೆಗೆ ಚಾಮುಂಡಿ ದೇವಿ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.