CM Siddaramaiah: ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
CM Siddaramaiah: ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹೊರತಂದಿರುವ 2025ರ ಕ್ಯಾಲೆಂಡರ್ ಅನ್ನು ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹೊರತಂದಿರುವ 2025ರ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

ಬೆಂಗಳೂರು, ಜ. 15, 2025: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಂಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು.
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದ ಅವರು, ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯುಸಿಯಾಗಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಶಾಸಕ ರಘುಮೂರ್ತಿ ಅವರು ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು.
ಈ ಸುದ್ದಿಯನ್ನೂ ಓದಿ | KUWJ awards: ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ; ಯಾರಿಗೆ ಯಾವ ಪ್ರಶಸ್ತಿ?
ಈ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ. ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ. ಮೋಹನ್ ಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಕೆ. ಪರಮೇಶ್ವರ್, ಆನಂದ್ ಬೈದನಮನೆ, ಪಿ.ಎಸ್. ಕೃಷ್ಣಕುಮಾರ್, ನಯನಾ ಸೇರಿದಂತೆ ಸಂಘದ ನಿರ್ದೇಶಕರು, ಕಾರ್ಯದರ್ಶಿ ಕೆಂಪರಾಜು ಉಪಸ್ಥಿತರಿದ್ದರು.