Thursday, 1st December 2022

ಹಳೆ ದ್ವೇಷದ ಹಿನ್ನೆಲೆ: ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಗುಂಪು ಘರ್ಷಣೆ

ಕೋಲಾರ: ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ತುರ್ತು ಚಿಕಿತ್ಸಾ ಘಟಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನಗರದ ಕಠಾರಿಪಾಳ್ಯದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಜಗಳದಲ್ಲಿ ಹಲವರಿಗೆ ರಕ್ತ ಗಾಯಗಳಾಗಿದೆ. ಅಪರಂಜಿ ನಾರಾಯಣಸ್ವಾಮಿ ಮತ್ತು ಗಂಗಾಧರ ಬಣಗಳ ಮಧ್ಯೆ ಜಗಳ ನಡೆದಿದೆ.

ಜಗಳದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಐವರು ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿಯೂ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ತುರ್ತು ಚಿಕಿತ್ಸಾ ಘಟಕದ ಪೀಠೋಪಕರಣಗಳು ಹೊಡೆದಾಟಕ್ಕೆ ಬಳಕೆಯಾಗಿದೆ. ಈ ಘಟನಾವಳಿಗಳು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಗಲಾಟೆಯಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಿರುವ ಕಠಾರಿಪಾಳ್ಯದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ.