ರಕ್ಷಣಾ ವಲಯದಲ್ಲಿ ಆತ್ಮನಿರ್ಭರ ಭಾರತಕ್ಕೆ ಪ್ರೋತ್ಸಾಹ
ರಕ್ಷಣಾ ವಲಯದಲ್ಲಿ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡಲು ರಕ್ಷಣಾ ಸಚಿವಾಲಯ ಮುಂದಾಗಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಕ್ಷಿಪಣಿ, ಶೆಲ್ ಉತ್ಪಾದನೆಯ ಅವಕಾಶವನ್ನು ಖಾಸಗಿ ವಲಯಕ್ಕೆ ತೆರೆಯಲಿದೆ. ಇದರಿಂದಾಗಿ ಇನ್ನು ಮುಂದಿನ ದೀರ್ಘಾವಧಿಯ ಯುದ್ಧ ಸಂದರ್ಭಗಳಲ್ಲಿ ಭಾರತಕ್ಕೆ ಮದ್ದುಗುಂಡುಗಳ ಕೊರತೆ ಆಗುವುದಿಲ್ಲ ಎನ್ನಲಾಗುತ್ತಿದೆ.