#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Budget 2025: ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕೆ ಬಂಪರ್‌ ಕೊಡುಗೆ

ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ(union budget 2025) ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದೇ ವೇಳೆ ಬಿಹಾರದ 500 ಹೆಕ್ಟೇರ್‌ ಜಮೀನಿಗೆ ನೀರಾವರಿ ಯೋಜನೆಯನ್ನು ಅಭಿವೃದ್ಧಿ ಮಾಡುವುದಾಗಿ ಹೇಳಲಾಗಿದೆ.

union budget 2025: ಬಿಹಾರಕ್ಕೆ ಬಂಪರ್‌ ಕೊಡುಗೆ

nirmala

Profile Abhilash BC Feb 1, 2025 12:22 PM

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ(budget 2025) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರಕ್ಕೆ ಬಂಪರ್‌(Big Budget Gifts For Bihar ) ಕೊಡುಗೆ ನೀಡಿದ್ದಾರೆ. ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ, ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ, ಮಖಾನಾ ಮಂಡಳಿ ಸೇರಿದಂತೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ.

ಕಳೆದ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ JDU ಬೆಂಬಲ ಪಡೆದಿತ್ತು. ಹೀಗಾಗಿ ಬಿಹಾರಕ್ಕೆ ಹೆಚ್ಚಿನ ಕೊಡುಗೆಗಳನ್ನು ನೀಡಿದಂತಿದೆ. ಕಳೆದ ಬಾರಿಯ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಮಿತ್ರ ಪಕ್ಷಗಳ ರಾಜ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿತ್ತು. ಈ ಬಾರಿಯೂ ಇದೇ ರಾಜ್ಯಗಳಿಗೆ ಭರ್ಜರಿ ಕೊಡುಗೆ ನೀಡಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಸಂಸದರು ಗದ್ದಲವನ್ನು ಎಬ್ಬಿಸಿದ್ದಾರೆ.

ಬಜೆಟ್‌ ಪ್ರತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ budget_speech-1



ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದೇ ವೇಳೆ ಬಿಹಾರದ 500 ಹೆಕ್ಟೇರ್‌ ಜಮೀನಿಗೆ ನೀರಾವರಿ ಯೋಜನೆಯನ್ನು ಅಭಿವೃದ್ಧಿ ಮಾಡುವುದಾಗಿ ಹೇಳಲಾಗಿದೆ.