ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ಬಾರಿಗೆ ಮಂಡಿಸಿದ ಬಜೆಟ್‌ನಲ್ಲಿ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. 'ಧನ್ ಧ್ಯಾನ್ ಕೃಷಿ' ಯೋಜನೆಯನ್ನು ಘೋಷಿಸಿದ್ದು, ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.
ಈ ಯೋಜನೆ ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದರು.
'ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ' ಕೃಷಿ ಜಿಲ್ಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮವಾಗಿದ್ದು, ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ' ಎಂದರು.
ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದರು. ಹೊಸ ಯೋಜನೆ ಯಿಂದ 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.
ಇದನ್ನೂ ಓದಿ Union Budget 2025: ಬಜೆಟ್ ಭಾಷಣ ಪ್ರಾರಂಭ ಆಗ್ತಿದ್ದಂತೆ ಪ್ರತಿಪಕ್ಷಗಳ ಗದ್ದಲ, ಪ್ರತಿಭಟನೆ
ಆತ್ಮ ನಿರ್ಭರ ಭಾರತ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ 10 ಕೋಟಿ. ರೂ.ವರೆಗೂ ಕಡಿಮೆ ಬಡ್ಡಿ ಸಾಲ, ಮೈಕ್ರೋ ಕಂಪೆನಿಗಳಿಗೆ 5 ಲಕ್ಷವರೆಗಿನ ಕ್ರಿಡಿಟ್ ಕಾರ್ಡ್ ವಿತರಣೆ ಹಾಗೂ ಇಂಥ 10 ಲಕ್ಷ ಕಾರ್ಡ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುವುದು ಎಂದರು.