Budget 2025: ಸರ್ಕಾರಿ ಶಾಲೆಗಳಿಗೆ ಇಂಟರ್ನೆಟ್ ಸೇವೆ
ಐಐಟಿ ಸಾಮರ್ಥ್ಯ ವಿಸ್ತರಣೆಯ ಬಗ್ಗೆಯೂ ಮಾತನಾಡಿದ ಹಣಕಾಸು ಸಚಿವೆ, ಕಳೆದ 10 ವರ್ಷಗಳಲ್ಲಿ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100% ಹೆಚ್ಚಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ (ಫೆ.01) ಲೋಕಸಭೆಯಲ್ಲಿ 2025-26ನೇ ಸಾಲಿನ ಬಜೆಟ್‌ನಲ್ಲಿ(Budget 2025) ಸಾರ್ವಜನಿಕ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಹಲವಾರು ಉಪಕ್ರಮಗಳನ್ನು ಘೋಷಣೆ ಮಾಡಿದರು. ಗ್ರಾಮೀಣ ಪ್ರದೇಶದ ಎಲ್ಲ ಸರ್ಕಾರಿ ಮಾಧ್ಯಮಿಕ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವೂ ಸೇರಿದೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಾಲೆಗಳಲ್ಲಿ 50 ಸಾವಿರ ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಲು ಭಾರತೀಯ ಭಾಷಾ ಪುಸ್ತಕ ಯೋಜನೆಯನ್ನು ಜಾರಿಗೆ ತರಲು ನಾವು ಪ್ರಸ್ತಾಪಿಸುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಬಜೆಟ್ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ budget_speech-1
ಐಐಟಿ ಸಾಮರ್ಥ್ಯ ವಿಸ್ತರಣೆಯ ಬಗ್ಗೆಯೂ ಮಾತನಾಡಿದ ಹಣಕಾಸು ಸಚಿವೆ, ಕಳೆದ 10 ವರ್ಷಗಳಲ್ಲಿ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100% ಹೆಚ್ಚಾಗಿದೆ ಎಂದು ಅವರು ಹೇಳಿದರು. 2014 ರ ನಂತರ ರಚಿಸಲಾದ 5 ಐಐಟಿಗಳಲ್ಲಿ 6,500 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮೂಲಸೌಕರ್ಯವನ್ನು ರಚಿಸಲಾಗುವುದು ಎಂದರು.
ಇದನ್ನೂ ಓದಿ Union Budget 2025-26: ಮಧ್ಯಮ ವರ್ಗಕ್ಕೆ ಗುಡ್‌ನ್ಯೂಸ್; ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು ಇನ್ನು ಅಗ್ಗ
ಮಧ್ಯಮ ವರ್ಗಕ್ಕೂ ಬಂಪರ್
ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಅವರು ಬಜೆಟ್ ಭಾಷಣದಲ್ಲಿ ಕಾರು, ಮೊಬೈಲ್ ಮತ್ತು ಟಿವಿಯಂತಹ ಅನೇಕ ಉತ್ಪನ್ನಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸಲಾಗುವ 36 ಜೀವರಕ್ಷಕ ಔಷಧಿಗಳ ಮೂಲ ಸುಂಕವನ್ನು ಹಣಕಾಸು ಸಚಿವರು ಕಡಿತಗೊಳಿಸಿದ್ದಾರೆ. ಈ ಮೂಲಕ ಹಲವು ವಸ್ತುಗಳು ಅಗ್ಗವಾಗಲಿದೆ.