ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್: ಸಿ.ಎಂ ಸಿದ್ದರಾಮಯ್ಯ

ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆ ಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿ ಯಾಗಿಲ್ಲ ಎಂಬು ದನ್ನು ಇದು ಸೂಚಿಸುತ್ತದೆ

Siddaramaiah on budget
Profile Ashok Nayak Feb 1, 2025 6:31 PM

ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ. ದೆಹಲಿ ಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ. ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯ: ಜೆಡಿಎಸ್-ಬಿಜೆಪಿ ದೋಸ್ತಿ ಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗು ತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ

ಇದನ್ನೂ ಓದಿ: Union Budget 2025: ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಕೇಂದ್ರ ಬಜೆಟ್: ಸಚಿವೆ ಹೆಬ್ಬಾಳ್ಕರ್ ಕಿಡಿ

ಬಜೆಟ್ ನ ಇತರೆ ಹೈಲೈಟ್ಸ್ ಗಳು...

2024-25 ರ ಪತಿಷ್ಕೃತ ಬಜೆಟ್ 47,16000 ಕೋಟಿ ಆಗಿತ್ತು. 104000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿ ಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ.

Siddaramaiah presemeet on Union Budget

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಇಂದು ಕೇಂದ್ರದ ಬಜೆಟ್ಟನ್ನು ಮಂಡಿಸಿದ್ದಾರೆ.

*ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿ ಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ.

*ಕೇಂದ್ರ ಸರ್ಕಾರದ 50.65 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ 15,68,936 ಕೋಟಿ ರೂಪಾಯಿ ಯಷ್ಟು ಸಾಲ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಪ್ರಸ್ತಾಪಿಸಿದ್ದಾರೆ. ಇದೂ ಸೇರಿ ದರೆ, ನನ್ನ ಅಂದಾಜಿನ ಪ್ರಕಾರ 2026ರ ಮಾರ್ಚ್ ವೇಳೆಗೆ ದೇಶದ ಸಾಲ 202 ರಿಂದ 205 ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟಬಹುದು.

ನಿರ್ಮಲಾ ಸೀತಾರಾಮನ್ ಅವರೆ ತಮ್ಮ ಬಜೆಟ್ ದಾಖಲೆಗಳಲ್ಲಿ ಹೇಳಿರುವಂತೆ ಈ ವರ್ಷ ಬಡ್ಡಿ ಪಾವತಿಗಾಗಿ 12.7 ಲಕ್ಷ ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತದೆ. ಈ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಶೇ.4.4 ರಷ್ಟು ಇರಲಿದೆ ಎಂದು ಅಂದಾಜು ಮಾಡಲಾಗಿದೆ. ರೆವಿನ್ಯೂ ಕೊರತೆ ಶೇ.1.5 ರಷ್ಟು ಇರಲಿದೆ ಎಂದು ಅಂದಾಜು ಮಾಡಿದ್ದಾರೆ.

ಇದನ್ನೂ ಓದಿ: Union Budget: ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ಡಿಟೇಲ್ಸ್‌

*ಮುಖ್ಯವಾಗಿ, ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯಕ್ಕೆ ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಣ್ಣ ಪ್ರಮಾಣದಲ್ಲಿ ಆಂಧ್ರ ಪ್ರದೇಶ ಬಿಟ್ಟರೆ ಉಳಿದ ಯಾವ ರಾಜ್ಯಗಳಿಗೂ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಹನ್ನೊಂದು ಬಜೆಟ್ ಗಳನ್ನು ನೋಡು ತ್ತಾ ಬಂದ ನಮಗೆ ಹನ್ನೆರಡನೇ ಬಜೆಟ್ ಬಗ್ಗೆ ಹೆಚ್ಚಿನ ನಿರೀಕ್ಷೆ ಇರಲಿಲ್ಲ. ಇದು ಅವರೇ ಆಗಾಗ ಹೇಳಿಕೊಳ್ಳುತ್ತಿರು ‘’ವಿಕಸಿತ ಭಾರತದ ಬಜೆಟ್ ಅಲ್ಲ ‘’ಅವನತ ಭಾರತ’’ ದ ಬಜೆಟ್.

 ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದ್ದ ಭಾರತವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಕ್ಕೆ ಎಳೆದೊಯ್ಯುತ್ತಿದೆ. ಇದು ಯಥಾಪ್ರಕಾರ ಕರ್ನಾಟಕದ ಪಾಲಿಗೆ ಮಾತ್ರವಲ್ಲ ಇಡೀ ದೇಶಕ್ಕೆ ನಿರಾಶದಾಯಕ, ನಷ್ಟದಾಯಕ ಮತ್ತು ಹಾನಿಕಾರಕ ಬಜೆಟ್.

ಇದನ್ನೂ ಓದಿ: Union Budget 2025: ಕೇಂದ್ರದಿಂದ ಅತ್ಯಂತ ನಿರಾಶದಾಯಕ ಬಜೆಟ್‌: ಸಿಎಂ ಸಿದ್ದರಾಮಯ್ಯ ಟೀಕೆ

 ಪ್ರಧಾನಿ ಮೋದಿಯವರು ನಮ್ಮದು ಒಕ್ಕೂಟ ವ್ಯವಸ್ಥೆಯ ಭಾರತ ಎನ್ನುವುದನ್ನು ಮರೆತೇ ಬಿಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಎಂದಾಕ್ಷಣ ಪ್ರತಿಯೊಂದು ರಾಜ್ಯದ ಜನತೆ ತಮ್ಮ ರಾಜ್ಯಕ್ಕೆ ಏನಾಧರೂ ಕೊಡುಗೆಗಳಿರಬಹುದೇ ಎಂದು ಆಸೆ ಕಂಗಳಿಂದ ನೋಡುತ್ತಾರೆ. ಇಂದು ಮಂಡಿಸಿದ ಬಜೆಟ್ ನಲ್ಲಿ ಒಂದೆಡೆ ಬಿಹಾರ ಇನ್ನೊಂದೆಡೆ ಆಂಧ್ರಪ್ರದೇಶ ಬಿಟ್ಟರೆ ಬೇರೆ ರಾಜ್ಯಗಳ ಪ್ರಸ್ತಾವವೂ ಇಲ್ಲ, ಆ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆಗಳೂ ಇಲ್ಲ.

 ಈ ಬಾರಿಯ ಬಜೆಟ್ ನಲ್ಲಿ ಕರ್ನಾಟಕದ ಜನತೆ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬ ವಿವರವಾದ ಬೇಡಿಕೆಯ ಪಟ್ಟಿಯನ್ನು ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿದ್ದೆ. ಬಹುಷ: ಆ ಬೇಡಿಕೆಯ ಪಟ್ಟಿಯನ್ನು ಅವರು ಕಣ್ಣೆತ್ತಿ ಕೂಡಾ ನೋಡಿದ ಹಾಗಿಲ್ಲ.

 ಕಳೆದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ‘’ ರಾಜ್ಯದ ಜನ ಬಿಜೆಪಿಯನ್ನು ಗೆಲ್ಲಿಸದಿದ್ದರೆ ನರೇಂದ್ರ ಮೋದಿ ಆಶೀರ್ವಾದ ನಿಮಗೆ ಇರುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಕರ್ನಾಟಕದ ಸ್ವಾಭಿಮಾನಿ ಜನತೆ ಆ ಬೆದರಿಕಗೆ ಜಗ್ಗದೆ ಬಿಜೆಪಿಯನ್ನು ಸೋಲಿಸಿದ್ದರು. ಅದರಂತೆ ನರೇಂದ್ರ ಮೋದಿಯವರು ಕರ್ನಾಟಕದ ವಿರುದ್ದ ಸೇಡು ತೀರಿಸಿ ಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Budget 2025 income tax-ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ: 12 ಲಕ್ಷ ರೂ ವರೆಗೆ ಆದಾಯ ತೆರಿಗೆ ಇಲ್ಲ!

 ಕರ್ನಾಟಕದಲ್ಲಿರುವವರೆಲ್ಲರೂ ಪಕ್ಷದ ಮತದಾರರಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ 46% ಜನ ಬಿಜೆಪಿ ಪಕ್ಷಕ್ಕೂ ಮತಚಲಾಯಿಸಿದ್ದಾರೆ. ನರೇಂದ್ರಮೋದಿಯವರು ಕರ್ನಾಟಕದ ವಿರುದ್ದ ಸೇಡು ತೀರಿಸಿಕೊಳ್ಳುವ ಭರದಲ್ಲಿ ತಮ್ಮ ಪಕ್ಷಕ್ಕೆ ಮತಹಾಕಿದವರ ವಿರುದ್ದವೂ ಸೇಡು ತೀರಿಸಿಕೊಳ್ಳುತ್ತಿದ್ದಾರೆ.

 ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನ ಕಾರಣದಿಂದಾಗಿ ತೆರಿಗೆ ಹಂಚಿಕೆಯಲ್ಲಿ ನಮ ಗಾಗಿರುವ ಅನ್ಯಾಯ, ಜಿಎಸ್ ಟಿ ಪರಿಹಾರದಲ್ಲಿನ ಮೋಸ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಿಗದ ಪರಿಹಾರ, ನಮ್ಮ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ , ಮಹದಾಯಿ, ಭದ್ರಾ ಮೇಲ್ದಂಡೆ ಮತ್ತು ಮೇಕೆದಾಟು ವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡಬೇಕಾದ ಅಂಗೀಕಾರ ಮತ್ತು ಆರ್ಥಿಕ ನೆರವು, ಬೆಂಗಳೂರು ಮಹಾನಗರದ ಮೂಲಸೌಕರ್ಯಕ್ಕೆ ನೆರವು, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹೆಚ್ಚಿಸಬೇಕಾಗಿರುವ ಕೇಂದ್ರ ಸರ್ಕಾರದ ಪಾಲಿನ ಪ್ರಮಾಣ---ಹೀಗೆ ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಇವುಗಳಲ್ಲಿ ಯಾವುದೇ ಒಂದು ಅಂಶದ ಬಗ್ಗೆಯೂ ಬಜೆಟ್ ನಲ್ಲಿ ಪ್ರಸ್ತಾಪ ಮಾಡಿಲ್ಲ.

 ರಾಜ್ಯಕ್ಕೆ ಹದಿನೈದನೇ ಹಣಕಾಸು ಆಯೋಗದ ಪ್ರಕಾರವೇ ನೀಡಬೇಕಿರುವ ರೂ. 5495 ಕೋಟಿ ಹಣವನ್ನು ನೀಡುವ ಸುಳಿವು ಕೂಡ ಇಲ್ಲ. ತೆರಿಗೆ ಹೆಚ್ಚು ನೀಡುವ ರಾಜ್ಯಗಳ ಅಭಿವೃದ್ಧಿಗೆ ಅನುದಾನವನ್ನು ಹೆಚ್ಚಿಸುವ ಬಗ್ಗೆ ತುಟಿ ಬಿಚ್ಚಿಲ್ಲ.

 ಅಂಗನವಾಡಿ ಮತ್ತು ಆಶಾಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ರೂ.5000ಕ್ಕೆ ಮತ್ತು ಅಡುಗೆ ಕೆಲಸಗಾರರು ಮತ್ತು ಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ಕನಿಷ್ಠ ರೂ.5000 ಹೆಚ್ಚಿಸಬೇಕು ಎಂಬ ನಮ್ಮ ಬೇಡಿಕೆಯನ್ನು ಪುರಸ್ಕರಿಸಿಲ್ಲ

 ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ಯಡಿ ನಿರ್ಮಿಸುವ ಮನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ್ಠ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು.ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ) ಯೋಜನೆಯಡಿ ನಿರ್ಮಿಸುವ ಮನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ‍್ಠ ಮೂರು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು ಎಂದು ಕೇಳಿದ್ದೆವು, ಆ ಬೇಡಿಕೆಯನ್ನು ಕೂಡಾ ತಿರಸ್ಕರಿ ಸಲಾಗಿದೆ.

ಇದನ್ನೂ ಓದಿ: Union Budget 2025-26: 1 ಗಂಟೆ 14 ನಿಮಿಷ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌; ಇಲ್ಲಿದೆ ಅತೀ ದೀರ್ಘ, ಕಡಿಮೆ ಅವಧಿಯ ಬಜೆಟ್‌ ಭಾಷಣಗಳ ವಿವರ

ಪ್ರಕೃತಿ ವಿಕೋಪಕ್ಕೆ ಪರಿಹಾರ ನೀಡುವ ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ನ ಈಗಿನ ಮಾನದಂಡಗಳಿಂದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಅದನ್ನು ಬದಲಾಯಿಸಬೇಕು ಎಂದು ಕೇಳಿ ದ್ದೆವು, ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದ ಭೂ ಸ್ವಾಧೀನದ ಅರ್ಧದಷ್ಟು ವೆಚ್ವವನ್ನು ಮತ್ತು ಯೋಜನೆಯ ಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಬೇಕು ಎಂಬ ಬೇಡಿಕೆ ಕೂಡಾ ಸಲ್ಲಿಸಿದ್ದೆವು. ಅದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗುವುದು ಎಂಬ ಆಶ್ವಾಸನೆಯನ್ನು ಈಡೇರಿಸಿಲ್ಲ. ಕಳಸಾ-ಬಂಡೂರಿ ಯೋಜನೆಗಳಿಗೆ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಮಂಡಳಿಯ ಅನುಮತಿಯನ್ನೂ ಕೊಟ್ಟಿಲ್ಲ. ಮೇಕೆದಾಟು ಯೋಜನೆಯ ಬಗ್ಗೆಯೂ ಪ್ರಸ್ತಾಪವೇ ಇಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಕೂಡಾ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಆರ್ಥಿಕ ನೆರವು ನೀಡಬೇಕೆಂಬ ಬೇಡಿಕೆ ಕೂಡಾ ಇತ್ತು. ಬಜೆಟ್ ನಲ್ಲಿನ ಜಲಸಂಪನ್ಮೂಲ ಇಲಾಖೆ ಗಂಗೆ, ಯಮುನೆ ಬಿಟ್ಟರೆ ಅದಕ್ಕಿಂತ ಕೆಳಗೆ ದಕ್ಷಿಣದ ಕಡೆ ಇಳಿದೇ ಇಲ್ಲ.

 ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಮಲೆನಾಡು ಪ್ರದೇಶದ ಅಭಿವೃದ್ದಿ ಮಾಡಲು ಹತ್ತು ಸಾವಿರ ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ದಿ ಯೋಜನೆಗಳಿಗಾಗಿ 5000 ಕೋಟಿ ರೂಪಾಯಿಯ ವಿಶೇಷ ಅನುದಾನ ನೀಡಬೇಕೆಂದು ಕೇಳಿದ್ದೆವು. ಅದಕ್ಕೆ ಬಜೆಟ್ ನಲ್ಲಿ ಪ್ರತಿಕ್ರಿಯೆ ಯೇ ಇಲ್ಲ.

 ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿರುವ ಅನುದಾನ ದಲ್ಲಿಯೂ ಕಡಿತವಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರು ತಿಂಗಳಲ್ಲಿ 61 ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಜಾರಿಗೆ ತರುತ್ತಿರುವ 23 ಇಲಾಖೆಗಳಿಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ

ಇದನ್ನೂ ಓದಿ:Agriculture Budget 2025: ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ಬಂಪರ್‌ ಕೊಡುಗೆ ಘೋಷಿಸಿದ ಕೇಂದ್ರ

 ಈ ಹಿನ್ನೆಲೆಯಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಸ್ವರೂಪವನ್ನು ಬದಲಾಯಿಸಬೇಕೆಂದು ಕೋರಿದ್ದೆವು. ಈ ಯೋಜನೆಗಳನ್ನು ರೂಪಿಸುವಾಗ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ಮಾಡಬೇಕು. ಈ ಯೋಜನೆಗಳಲ್ಲಿ ವರ್ಷದಿಂದ ವರ್ಷಕ್ಕೆ ಕೇಂದ್ರದ ಪಾಲನ್ನು ಹೆಚ್ಚಿಸಬೇಕಾಗಿತ್ತು. ಆದರೆ ಪ್ರತಿ ಬಜೆಟ್ ನಲ್ಲಿ ಕೇಂದ್ರದ ಪಾಲನ್ನು ಕಡಿಮೆ ಮಾಡಲಾಗುತ್ತಿದೆ.

 ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ವಸೂಲು ಮಾಡುತ್ತಿರುವ ಸೆಸ್ ಮತ್ತು ಸರ್ಚಾರ್ಜ್ ಗಳಲ್ಲಿ ರಾಜ್ಯಗಳಿಗೆ ಪಾಲು ನೀಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಸೆಸ್ ಮತ್ತು ಸರ್ಚಾರ್ಜ್ ಅನ್ನು ರದ್ದುಗೊಳಿಸಬೇಕು ಇಲ್ಲವೆ ಅದನ್ನು ಒಟ್ಟು ತೆರಿಗೆಯ ನಿಧಿಗೆ ಸೇರಿಸಿ ಅದನ್ನು ರಾಜ್ಯಗಳಿಗೆ ಹಂಚಿಕೆ ಮಾಡಬೇಕು. . 2022ರ ಜುಲೈ ತಿಂಗಳಲ್ಲಿಯೇ ಜಿಎಸ್ ಟಿ ಪರಿಹಾರ ನೀಡುವುದನ್ನು ನಿಲ್ಲಿಸಿ ದರೂ 2026ರ ವರೆಗೆ ಸೆಸ್ ಸಂಗ್ರಹವನ್ನು ಮುಂದುವರಿಸಲಾಗಿದೆ.. ಈ ಸೆಸ್ ಬದಲಿಗೆ ಹೆಚ್ಚುವರಿ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್ ಜಿಎಸ್ ಟಿ) ಸಂಗ್ರಹಕ್ಕೆ ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿತ್ತು. ಈ ಬಜೆಟ್ ನಲ್ಲಿ ನಮ್ಮ ಬೇಡಿಕೆಯ ಪ್ರಸ್ತಾವವೇ ಇಲ್ಲ.

 ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾದ ಸಬ್‌ಅರ್ಬನ್‌ ರೈಲ್ವೇ, ಹೊರವರ್ತುಲ ರಸ್ತೆ, ಮೆಟ್ರೋ ವಿಸ್ತರಣೆ ಮುಂತಾದವುಗಳ ವಿಚಾರಗಳ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ.

ಇದನ್ನೂ ಓದಿ:Budget 2025 PDF: ಕೇಂದ್ರ ಬಜೆಟ್‌ ಪ್ರತಿ ಇಲ್ಲಿ ಡೌನ್​ಲೋಡ್​ ಮಾಡಿ

 ರಾಷ್ಟ್ರೀಯ ಬಜೆಟ್‌ ಒಂದಕ್ಕೆ ಇರಬೇಕಾದ ಸಮಗ್ರ ನೋಟವಾಗಲಿ, ದೂರಗಾಮಿ ದೂರದರ್ಶಿ ತ್ವವಾಗಲಿ, ಆರ್ಥಿಕ, ಸಾಮಾಜಿಕ, ಮಾನವಿಕ ಅಭಿವೃದ್ಧಿಯನ್ನು ಕಟ್ಟಿಕೊಡಬೇಕಾದ ಚಿಂತನೆಗಳು, ರೂಪಿಸಲಾದ ಯೋಜನೆಗಳಾಗಲಿ ಏನೊಂದೂ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ. ಆಯವ್ಯಯ ಎನ್ನುವು ದನ್ನು ಅಪಹಾಸ್ಯ ಮಾಡಿದಂತಿದೆ ಮೋದಿ ಸರ್ಕಾರದ ಈ ಬಜೆಟ್‌.

 ದೇಶದ ಕೃಷಿ ಕ್ಷೇತ್ರ ಅತ್ಯಂತ ಸಂಕಷ್ಟ-ಸಂಕಟಗಳನ್ನು ಎದುರಿಸುತ್ತಿದೆ. ಶೇಕಡಾ 60ರಷ್ಟು ಉದ್ಯೋಗ ನೀಡುವ ಈ ಕ್ಷೇತ್ರದ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕಾಗಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಆಗಾಗ ಕೃಷಿ ಕ್ಷೇತ್ರವನ್ನು ಉಲ್ಲೇಖಿಸಿದರು. ಆದರೆ ಬಜೆಟ್ ಒಳಗೆ ಇಣುಕಿ ನೋಡಿದರೆ ಸರ್ಕಾರದ ನಿಜವಾದ ಮುಖದ ದರ್ಶನವಾಗುತ್ತದೆ. ಆದರೆ ಕಳೆದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ 1,31,196 ಕೋಟಿ ರೂಪಾಯಿಗಳ ಅನುದಾನ ನೀಡಿದ್ದರೆ ಈ ಬಜೆಟ್ ನಲ್ಲಿ 1,27.290 ಕೋಟಿ ರೂಪಾಯಿ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಕಳೆದ ಬಜೆಟ್ ಗಿಂತಲೂ ಕಡಿಮೆ ಅನುದಾನ ಒದಗಿಸಲಾಗಿದೆ.

 ವಸತಿ ಕ್ಷೇತ್ರಕ್ಕೆ ಕಳೆದ ಬಜೆಟ್ ನಲ್ಲಿ 54,500 ಕೋಟಿ ರೂಪಾಯಿ ನಿಗದಿ ಪಡಿಸಲಾಗಿತ್ತು. ಆದರೆ ಪರಿಷ್ಕೃತ ಬಜೆಟ್ ನಲ್ಲಿ ಅದನ್ನು 32,426 ಕೋಟಿಗೆ ಇಳಿಸಲಾಗಿದೆ. ಜಲಜೀವನ್ ಮಿಷನ್ ಗೆ ಕಳೆದ ಬಜೆಟ್ ನಲ್ಲಿ 70163 ಕೋಟಿ ರೂಪಾಯಿ ನಿಗದಿಪಡಿಸಲಾಗಿತ್ತು ಆದರೆ ಪರಿಷ್ಕೃತ ಬಜೆಟ್ ನಲ್ಲಿ ಅದನ್ನು 27,694 ಕೋಟಿ ರೂಪಾಯಿ ಇಳಿಸಲಾಗಿದೆ. ಅಂದರೆ ಬಜೆಟ್ ನಲ್ಲಿ ಘೋಷಣೆ ಮಾಡಿ ದ್ದಷ್ಟು ಹಣವನ್ನು ಯೋಜನೆಗಳಿಗೆ ಖರ್ಚು ಮಾಡಿಲ್ಲ.

ಇದನ್ನೂ ಓದಿ:Budget 2025: ಎಸ್‌ಸಿ, ಎಸ್‌ಟಿ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ಅವಧಿ ಸಾಲ ಘೋಷಣೆ!

 ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ಗರಿಷ್ಠ ಉದ್ಯೋಗದ ಅವಕಾಶಗಳನ್ನು ಕಲ್ಪಿಸುವ ನರೇಗಾ ಯೋಜನೆಗೆ 2023-24 ಅವಧಿಯಲ್ಲಿ 80,153 ಕೋಟಿ ರೂಪಾಯಿ ನಿಗದಿಪಡಿಸಲಾಗಿತ್ತು. ಕಳೆದ ವರ್ಷದ ಬಜೆಟ್ ನಲ್ಲಿ ಅದನ್ನು 86,000 ಕೋಟಿ ರೂಪಾಯಿಗೆ ಇಳಿಸಲಾಗಿತ್ತು. ಈವರ್ಷದ ಬಜೆಟ್ ನಲ್ಲಿ 86,000 ಕೋಟಿ ರೂಪಾಯಿಯನ್ನೇ ಮುಂದುವರಿಸಲಾಗಿದೆ.

 ಆದಾಯ ತೆರಿಗೆಯ ಮಿತಿಯನ್ನು ಹನ್ನೆರಡು ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾ ಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಒಂದಷ್ಟು ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ.

 ಕೇಂದ್ರ ಬಜೆಟ್‌ ಎನ್ನುವುದು ದೇಶದ ಅಭಿವೃದ್ದಿಯ ನಕಾಶೆಯನ್ನು ಬಿಂಬಿಸುವ ಆರ್ಥಿಕ ನೀತಿ, ನಿರೂಪಣೆಗಳು, ಯೋಜನೆಗಳ ಸಮಗ್ರ ಚಿತ್ರಣವನ್ನು ನೀಡುವ ದಾಖಲೆಯಾಗಿರಬೇಕು. ಅಭಿವೃದ್ಧಿ ಯ ವಿಚಾರದಲ್ಲಿ ಪ್ರಸಕ್ತ ದೇಶ ಎದುರಿಸುತ್ತಿರುವ ಸವಾಲಗಳನ್ನು ಸಮರ್ಥವಾಗಿ ಎದುರಿಸಲು ರೂಪಿಸಿರುವ ನೀತಿ, ಯೋಜನೆಗಳ ಮಾಹಿತಿಯನ್ನು ನೀಡಬೇಕು. ಇದಕ್ಕೆ ಒದಗಿಸಿರುವ ಹಣಕಾಸಿನ ವಿಚಾರಗಳನ್ನು ತಿಳಿಸಬೇಕು. ಈ ಬಜೆಟ್‌ಗೆ ಅಂತಹದ್ದೊಂದು ಸ್ವರೂಪವೇ ಇಲ್ಲ.

ಇದನ್ನೂ ಓದಿ:Union Budget 2025-26: ಯಾವ ವಸ್ತು ಅಗ್ಗ? ಯಾವ ವಸ್ತು ದುಬಾರಿ? ಇಲ್ಲಿದೆ ವಿವರ

 ಕೃಷಿ ಹಾಗೂ ನೀರಾವರಿ ಕ್ಷೇತ್ರಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಒತ್ತು ನೀಡುವಂತಹ ಯಾವುದೇ ಮಹತ್ವದ ಯೋಜನೆಗಳನ್ನು, ಕ್ರಮಗಳನ್ನು ಕೇಂದ್ರ ಕೈಗೊಂಡಿಲ್ಲ. ಯಾವುದೇ ರಾಷ್ಟ್ರೀಯ ಯೋಜನೆಗಳ ಪ್ರಸ್ತಾಪವಿಲ್ಲ. ಅ ಮೂಲಕ ಬಂಡವಾಳ ವೆಚ್ಚವನ್ನು ಮಾಡುವುದರಿಂದ ಸಂಪೂ ರ್ಣ ಹಿಂದೆ ಸರಿದಿದ್ದು ದೇಶದೆಡೆಗಿನ ತನ್ನ ಜವಾಬ್ದಾರಿ ಹಾಗೂ ಕರ್ತವ್ಯಗಳಿಂದ ವಿಮುಖವಾಗಿದೆ.

 ದೇಶದ ಅಭಿವೃದ್ಧಿ ಎಂಜಿನ್‌ಗಳು ಎಂದೇ ಕರೆಯಲಾಗುವ ಮೆಟ್ರೋ ನಗರಿಗಳು, ಬೃಹತ್‌ ನಗರ ಗಳಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಯಾವುದೇ ವಿಶೇಷ ಮಹತ್ವ ದೊರೆತಿಲ್ಲ. 'ಅರ್ಬನ್‌ ಚಾಲೆಂಜ್‌ ಫಂಡ್‌' ಎನ್ನುವ ಯೋಜನೆ ಘೋಷಿಸಲಾಗಿದೆಯಾದರೂ ಇದಕ್ಕೆ ಮೀಸಲಿರಿಸಿರುವ ಮೊತ್ತ ಅತ್ಯಲ್ಪ.

 ರಾಜ್ಯದ ಯೋಜನೆಗಳೆಡೆಗಿನ ದಿವ್ಯ ಮೌನ, ಅಸಡ್ಡೆ, ನಿರ್ಲಕ್ಷ್ಯಗಳು ಈ ಬಾರಿಯೂ ಯಥಾ ಪ್ರಕಾರ ಮುಂದುವರೆದಿವೆ. ರಾಜ್ಯದ ಬೇಡಿಕೆಗಳ ಬಗ್ಗೆ ಮಲತಾಯಿ ಧೋರಣೆ ಮಾತ್ರವೇ ಅಲ್ಲದೆ, ಅಸೀಮ ನಿರ್ಲಕ್ಷ್ಯ, ಪ್ರಜ್ಞಾಪೂರ್ವಕ ಉದಾಸೀನ ಮನೋಭಾವವನ್ನು ಕೇಂದ್ರ ಯಥಾಪ್ರಕಾರ ಮುಂದುವರೆಸಿದೆ.

ಇದನ್ನೂ ಓದಿ:Budget 2025: ಸರ್ಕಾರಿ ಶಾಲೆಗಳಿಗೆ ಇಂಟರ್ನೆಟ್ ಸೇವೆ

 ಈ ಬಜೆಟ್‌ನ ಸ್ವರೂಪವೇ ಚದುರಿದಂತೆ ಇದ್ದು, ಅಭಿವೃದ್ಧಿಯ ಕುರಿತು ಸ್ಪಷ್ಟವೂ, ನಿರ್ದಿಷ್ಟವೂ ಆದ ವಲಯವಾರು, ಕ್ಷೇತ್ರವಾರು, ಭೌಗೋಳಿಕವಾರು ಮಾಹಿತಿಗಳನ್ನು ನೀಡುವುದನ್ನು ಉದ್ದೇಶ ಪೂರ್ವಕವಾಗಿ ತಪ್ಪಿಸಿಕೊಂಡಿದೆ. ಹಾಗಾಗಿ, ದೇಶದ ಸಮಗ್ರ ಅಭಿವೃದ್ಧಿಯ ಚಿತ್ರಣವೇ ಬಜೆಟ್‌ನಲ್ಲಿ ಮಾಯವಾಗಿದ್ದು, ಅಸ್ಪಷ್ಟತೆ, ಗೊಂದಲಗಳಿಂದ ತುಂಬಿದೆ.

 ಕನ್ನಡಿಗರ, ಕರ್ನಾಟಕದ ಪಾಲಿಗೆ ಇದೊಂದು ನಿರಾಶಾದಾಯಕ, ಅಭಿವೃದ್ಧಿವಿಹೀನ ಬಜೆಟ್‌. ಕನ್ನಡಿಗರಿಂದ ತೆರಿಗೆ ಮಾತ್ರವೇ ಪಡೆಯಬೇಕು ಬದಲಾಗಿ ಏನೂ ನೀಡಬಾರದು ಎನ್ನುವ ಮನೋ ಭಾವ ಕೇಂದ್ರ ಸರ್ಕಾರದಲ್ಲಿ ಆಳವಾಗಿ ಬೇರೂರಿರುವುದಕ್ಕೆ ಈ ಬಜೆಟ್‌ ಸಾಕ್ಷೀರೂಪವಾಗಿದೆ.

*

*ನಾವು ಮೇಕೆದಾಟು ಯೋಜನೆಗಾಗಿ ಹಲವಾರು ಬಾರಿ ಒತ್ತಾಯಿಸಿದ್ದೆವು. ಬೆಂಗಳೂರು ಅತಿ ಹೆಚ್ಚು ತೆರಿಗೆಯನ್ನು ಸಂಗ್ರಹಿಸಿಕೊಡುವ ನಗರವಾಗಿದೆ. ಈ ನಗರಕ್ಕೆ ಕುಡಿಯುವ ನೀರು ಸಮರ್ಪಕವಾಗಿ ಆಗಬೇಕಾದರೆ ಮೇಕೆದಾಟು ಯೋಜನೆ ಆಗಬೇಕು ಎಂದು ಒತ್ತಾಯಿಸಿದ್ದೆವು. ಆದರೆ ಈ ಬಜೆಟ್‌ನಲ್ಲಿ ನಮಗೆ ನಿರಾಸೆ ಉಂಟು ಮಾಡಿದ್ದಾರೆ.

*ಮಹದಾಯಿ, ಭದ್ರಾ ಮೇಲ್ದಂಡೆ ಮುಂತಾದ ಯಾವುದೇ ನೀರಾವರಿ ಯೋಜನೆಗಳಿಗೂ ಈ ಬಜೆಟ್‌ ನಲ್ಲಿ ನಯಾಪೈಸೆ ಒದಗಿಸಿಲ್ಲ. ಕರ್ನಾಟಕ ರಾಜ್ಯವು ಬರ, ಪ್ರವಾಹ, ಗುಡ್ಡ ಕುಸಿತ, ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಅದಕ್ಕಾಗಿ ವಿಶೇಷ ಪ್ಯಾಕೇಜನ್ನು ನೀಡುವಂತೆ ಕೇಳಿದ್ದೆವು. ಅದರ ಬಗ್ಗೆ ಚಕಾರವನ್ನು ಎತ್ತಿಲ್ಲ.

ಇದನ್ನೂ ಓದಿ:Budget 2025: 10,000 ಹೆಚ್ಚುವರಿ ವೈದ್ಯಕೀಯ ಕಾಲೇಜು ಸೀಟು; ಸಚಿವೆ ನಿರ್ಮಲಾ ಘೋಷಣೆ

*ಕರ್ನಾಟಕವು ಅತಿ ಹೆಚ್ಚು ಒಣ ಭೂಮಿ ಪ್ರದೇಶವುಳ್ಳ ರಾಜ್ಯವಾಗಿದೆ. ನೀರಾವರಿಗೆ ಹೆಚ್ಚಿನ ಆದ್ಯತೆ ಕೊಡಲು ವಿಶೇಷ ಅನುದಾನ ಒದಗಿಸಿ ಎಂದು ಕೇಳಿದ್ದೆವು. ಇದಕ್ಕೂ ಉತ್ತರವಿಲ್ಲ. ಕಲ್ಯಾಣ ಕರ್ನಾ ಟಕ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಯೋಜನೆಗಳನ್ನು ಒದಗಿಸಿ ಎಂದು ಕೇಳಿದ್ದೆವು. ಅದರ ಕುರಿತು ಬಜೆಟ್ ಮೌನವಾಗಿದೆ.

*ರಾಯಚೂರಿನಲ್ಲಿ ಏಮ್ಸ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆ ಮಾಡಿದ್ದೆ, ಈ ಕುರಿತು ಕೇಂದ್ರ ಆರೋಗ್ಯ ಸಚಿವರು ಪತ್ರದ ಮೂಲಕ ಸಣ್ಣ ಭರವಸೆಯನ್ನೂ ನೀಡಿದ್ದರು. ಈ ವರ್ಷದ ಬಜೆಟ್‌ನಲ್ಲಿ ಕೂಡ ಏಮ್ಸ್ ಬಗ್ಗೆ ಪ್ರಸ್ತಾಪವಿಲ್ಲ.

*ರಾಜ್ಯಗಳಿಂದ ಹೆಚ್ಚುವರಿಯಾಗಿ ಸಂಗ್ರಹಿಸುತ್ತಿರುವ ಜಿ.ಎಸ್.ಟಿ. ಸೆಸ್‌ಗಳನ್ನು ಜಿ.ಎಸ್.ಟಿ. ನಷ್ಟ ಭರ್ತಿ ಮಾಡಲು ನಮಗೇ ವಾಪಾಸ್ ಕೊಡಿ ಎಂದು ಕೇಳಿದ್ದೆವು. ಇದಕ್ಕೆ ಉತ್ತರವಿಲ್ಲ.

*ರಾಜ್ಯದ ನಗರಗಳಿಗೆ, ರಾಜ್ಯದ ಕುಡಿಯುವ ನೀರಿನ ಯೋಜನೆಗಳಿಗೆ, ರಾಜ್ಯದ ಗ್ರಾಮೀಣ ಪ್ರದೇಶ ಗಳಿಗೆ, ರಾಜ್ಯದ ರೈಲು ಮತ್ತು ಹೆದ್ದಾರಿ ಯೋಜನೆಗಳಿಗೆ ಈ ಬಜೆಟ್ ಏನನ್ನೂ ಹೊಸದಾಗಿ ಕೊಟ್ಟಿಲ್ಲ.

ಇದನ್ನೂ ಓದಿ: Union Budget 2025: ಚುನಾವಣೆ ನಿಮಿತ್ತ ಬಿಹಾರ ರಾಜ್ಯಕ್ಕೆ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ!

ಬೆಂಗಳೂರಿನ ರಾಜಕಾಲುವೆ ನಿರ್ವಹಣೆಗೆ ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಸುಗಮ ಸಂಚಾರ ಕ್ಕಾಗಿ ಹಲವು ಸಾರಿಗೆ ಕಾರಿಡಾರ್‌ಗಳ ನಿರ್ಮಾಣಕ್ಕೆ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಕೊಡಿ ಎಂದು ಕೇಳಿದ್ದೆವು. ಆದರೆ, ಬಜೆಟ್‌ನಲ್ಲಿ ಖಾಲಿ ಚೊಂಬನ್ನು ಕೊಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ಎಂದು ಕೇಳಿ ದ್ದೆವು. ಅವರಿಗೂ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಚೊಂಬು ಕೊಟ್ಟಿದೆ.

*ರಾಜ್ಯದಲ್ಲಿನ ವೃದ್ಧರು, ಅಂಗವಿಕಲರು, ವಿಧವೆಯರು, ಮುಂತಾದವರಿಗೆ ಮಾಸಿಕ ಭದ್ರತೆ ನೀಡುವ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ನೀಡಲಾಗುತ್ತದೆ. ಈ ಪಿಂಚಣಿ ಮೊತ್ತವು ಮನ ಮೋಹನ್ ಸಿಂಗ್ ಅವರ ಕಾಲದಲ್ಲಿ ಇದ್ದಷ್ಟೇ ಮೊತ್ತವನ್ನು ಈಗಲೂ ನೀಡಲಾಗುತ್ತಿದೆ. ಇದನ್ನು ಹೆಚ್ಚು ಮಾಡಿ ಎಂದು ಕೇಂದ್ರವನ್ನು ಒತ್ತಾಯಿಸಿದ್ದೆವು. ಕೇಂದ್ರ ಸರ್ಕಾರ, ಈ ಬಾಬತ್ತಿಗೆ ಸುಮಾರು 500 ಕೋಟಿ ರೂಪಾಯಿಗಳನ್ನು ಮಾತ್ರ ಕೊಡುತ್ತಿದೆ. ಆದರೆ ನಾವು ರಾಜ್ಯದ ಬಜೆಟ್‌ನಲ್ಲಿ 10,000 ಕೋಟಿ ರೂಪಾಯಿಗಳನ್ನು ಒದಗಿಸುತ್ತಿದ್ದೇವೆ. ಇದರಿಂದ ರಾಜ್ಯಗಳಿಗೆ ಹೊರೆಯಾಗುತ್ತಿದೆ. ಇದನ್ನು ಹೆಚ್ಚು ಮಾಡಿ ಎಂದು ಕೇಳಿದರೆ, ಬಜೆಟ್‌ನಲ್ಲಿ ಈ ಕುರಿತು ಪ್ರಸ್ತಾಪವೇ ಇಲ್ಲ.

ಇದನ್ನೂ ಓದಿ: Union Budget: ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಬಂಪರ್‌ ! ತೆರಿಗೆಯಲ್ಲಿ ವಿನಾಯಿತಿ

ರಾಜ್ಯದ ಬಡವರಿಗೆ ವಸತಿ ಕಲ್ಪಿಸುವುದಕ್ಕಾಗಿ ನೀಡಲಾಗುವ ಅನುದಾನವನ್ನು ನಗರ ಪ್ರದೇಶ ಗಳಿಗೆ 1.5 ಲಕ್ಷ ನೀಡಲಾಗುತ್ತಿದೆ. ಅದನ್ನು 5 ಲಕ್ಷಗಳಿಗೆ ಹೆಚ್ಚಿಸಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರ 72,000 ರೂಪಾಯಿ ನೀಡುತ್ತಿದೆ, ಅದನ್ನು 3 ಲಕ್ಷಗಳಿಗೆ ಹೆಚ್ಚಿಸ ಬೇಕು ಎಂದು ಒತ್ತಾಯಿಸಿದ್ದೆವು. ಆದರೆ ಈ ಬಜೆಟ್‌ನಲ್ಲಿ ಅದಕ್ಕೆ ಉತ್ತರವೇ ಇಲ್ಲ.

ಮಲೆನಾಡಿನ ಅಭಿವೃದ್ಧಿ, ಕರಾವಳಿ ಅಭಿವೃದ್ಧಿಗೆ ಅನುದಾನ ಕೇಳಿದ್ದೆವು. ಅದಕ್ಕೂ ಯಾವುದೇ ಪ್ರಸ್ತಾಪವಿಲ್ಲ.

ಒಟ್ಟಾರೆ, ಮೋದಿ ಸರ್ಕಾರದ ಈ ಬಜೆಟ್ ಕರ್ನಾಕಟಕ್ಕೆ ಚೊಂಬು ಕೊಡುವ ಅಭಿಯಾನವನ್ನು ಈ ಬಜೆಟ್‌ನಲ್ಲೂ ಮುಂದುವರೆಸಿದೆ.

ಈ ಬಜೆಟ್ ದುಡಿಯುವ ವರ್ಗದ ಜನರಿಗೆ, ಮಹಿಳೆಯರಿಗೆ, ರೈತರಿಗೆ, ಆದಿವಾಸಿಗಳಿಗೆ, ಪರಿಶಿಷ್ಟ ಜಾತಿ/ಪಂಗಡದವರಿಗೆ, ವಿದ್ಯಾರ್ಥಿಗಳಿಗೆ, ಯುವಜನರಿಗೆ, ಗ್ರಾಮೀಣ ಮತ್ತು ನಗರವಾಸಿಗಳಿಗೆ, ಕಾರ್ಮಿಕರಿಗೆ ಯಾವುದೇ ಭರವಸೆಯನ್ನು ನೀಡಿಲ್ಲ.

ಜನರ ಕೈಯಲ್ಲಿ ಹಣ ಇಲ್ಲದೆ ಅವರ ಕೊಂಡುಕೊಳ್ಳುವ ಶಕ್ತಿ ಕಡಿಮೆಯಾಗುತ್ತಿದೆ. ಹಾಗಾಗಿ ಗ್ರಾಮೀ ಣ ಪ್ರದೇಶದಲ್ಲಿ ಜನರು ನಿರುದ್ಯೋಗಿಗಳಾಗಬಾರದು ಎಂಬ ಉದ್ದೇಶದಿಂದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಈ ವರ್ಷ ಕೂಡ ಕಡಿಮೆ ಅನುದಾನ ಒದಗಿಸಲಾಗಿದೆ. 2023-24 ರ ಬಜೆಟ್‌ನಲ್ಲಿ 89,154 ಕೋಟಿ ಅನುದಾನ ಒದಗಿಸಿದ್ದರೆ, ಈ ಬಜೆಟ್‌ ನಲ್ಲಿ 86,000 ಕೋಟಿ ರೂಪಾಯಿಗಳನ್ನು ಮಾತ್ರ ಒದಗಿಸಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ 2024-25 ರಲ್ಲಿ 8,250 ಕೋಟಿ ಅನುದಾನ ಒದಗಿಸಿ ದ್ದರೆ, ಈ ಬಜೆಟ್‌ನಲ್ಲಿ 8,260 ಕೋಟಿ ಮಾತ್ರ ಒದಗಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ ವನ್ನೂ ಹೆಚ್ಚಿಸಿಲ್ಲ.

ರೈತರ ಬೆಳೆಗಳಿಗೆ ನೀಡಲಾಗುವ ಬೆಳೆ ವಿಮೆಗೆ 2024-25 ರಲ್ಲಿ 15,864 ಕೋಟಿ ರೂಪಾಯಿಗಳನ್ನು ಒದಗಿಸಿದ್ದರೆ, ಈ ವರ್ಷ ಕೇವಲ 12,242 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.

ನಿರ್ಮಲಾ ಸೀತಾರಾಮನ್ ಅವರು ಪೋಷಣ್ ಅಭಿಯಾನ-2 ರ ಬಗ್ಗೆ ಬಜೆಟ್‌ನಲ್ಲಿ ಹೊಸದಾಗಿ ಮತ್ತು ದೊಡ್ಡದಾಗಿ ಪೋಷಣ್-2 ಎಂದು ಅನುಷ್ಠಾನ ಮಾಡುವುದಾಗಿ ಓದಿದರು. ಆದರೆ 2023-24 ರಲ್ಲಿ 21,810 ಕೋಟಿ ರೂ. ಅನುದಾನ ಖರ್ಚು ಮಾಡಿದ್ದರೆ, ಈ ವರ್ಷ ಕೇವಲ 150 ಕೋಟಿ ರೂ ಪಾಯಿಗಳನ್ನು ಮಾತ್ರ ಹೆಚ್ಚು ಮಾಡಿ 21,960 ಕೋಟಿ ರೂಪಾಯಿಗಳನ್ನು ಒದಗಿಸಿದ್ದಾರೆ.

*ಯಥಾ ಪ್ರಕಾರ ಈ ಬಜೆಟ್‌ನಲ್ಲಿ ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ, ಸಬ್ ಕಾ ಸಾಥ್-ಸಬ್ ಕಾ ವಿಕಾಸ್, ಮುಂತಾದ ಪದಗಳನ್ನು ಯಥೇಚ್ಛವಾಗಿy ನಿರ್ಮಲಾ ಸೀತಾರಾಮನ್ ಅವರು ಉಪಯೋಗಿಸಿದರು. ಆದರೆ, ಮೇಕ್ ಇನ್ ಇಂಡಿಯಾಗೆ ಕೇವಲ 100 ಕೋಟಿ ರೂಪಾ ಯಿಗಳನ್ನು ಒದಗಿಸಿದ್ದಾರೆ. ಹಾಗಾಗಿ ಇದು ಬರಿ ಬಾಯಿ ಮಾತಿನಲ್ಲಿ ಹೊಟ್ಟೆ ತುಂಬಿಸುವ ಬಜೆಟ್ ಆಗಿದೆ.

ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುವುದಾಗಿ ಬಜೆಟ್‌ನ ಆರಂಭದಲ್ಲೇ ಹೇಳಿದರು. ಆದರೆ ಒದಗಿಸಿರುವ ಅನುದಾನ ಮಾತ್ರ ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಿದೆ. ದ್ವಿದಳ ಧಾನ್ಯ ಗಳ ಉತ್ಪಾದನೆಗೆ ಸಂಬಂಧಪಟ್ಟಂತೆ ಆತ್ಮನಿರ್ಭರತೆ ಸಾಧಿಸುವುದಾಗಿ ಬಜೆಟ್‌ನಲ್ಲಿ ಹೇಳಿದ್ದಾರೆ. ಆದರೆ ಕೇವಲ 1000 ಕೋಟಿ ರೂಪಾಯಿ ಅನುದಾನ ಇಟ್ಟಿದ್ದಾರೆ. ಕಾಟನ್ ಟೆಕ್ನಾಲಜಿ ಮಿಷನ್‌ಗೆ ಕೇವಲ 500 ಕೋಟಿ ಇಟ್ಟಿದ್ದಾರೆ.

ಜಾನುವಾರುಗಳ ಆರೋಗ್ಯ ಸುಧಾರಣೆ ಹಾಗೂ ರೋಗ ನಿಯಂತ್ರಣಕ್ಕೆ 2024-25 ರಲ್ಲಿ 2,465 ಕೋಟಿ ರೂಪಾಯಿ ಒದಗಿಸಿದ್ದರೆ, ಈ ಬಾರಿ 1,980 ಕೋಟಿ ರೂ. ಮಾತ್ರ ಒದಗಿಸಿದ್ದಾರೆ. ದೇಶದ ಬಡವರಿಗೆ ಆಹಾರ ಖಾತ್ರಿ ಯೋಜನೆಗೆ 2024-25 ರಲ್ಲಿ 2.06 ಲಕ್ಷ ಕೋಟಿ ರೂಪಾಯಿ ಅನುದಾನ ಒದಗಿಸಿದ್ದರೆ, ಈ ಬಾರಿ 2.03 ಕೋಟಿ ಅನುದಾನ ಒದಗಿಸಿದ್ದಾರೆ.

ರೈಲ್ವೇ ಇಲಾಖೆಗೆ ನೀಡುವ ಅನುದಾನಗಳನ್ನೂ ಕಡಿಮೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 2024-25ರ ಬಜೆಟ್‌ನಲ್ಲಿ ಒದಗಿಸಿದ್ದ ಅನುದಾನಕ್ಕಿಂತ ಕೇವಲ 895 ಕೋಟಿ ರೂ. ಮಾತ್ರ ಈ ಬಾರಿ ಹೆಚ್ಚು ಮಾಡಿದ್ದಾರೆ.

ಹಾಗಿದ್ದರೆ, ಈ ಬಜೆಟ್‌ನಿಂದ ಯಾರಿಗೆ ಅನುಕೂಲ ಆಗಿದೆ ಎಂದು ನೋಡಿದರೆ, ನೇರವಾಗಿ ಅಂಬಾನಿಗೆ ಹಾಗೂ ಕೆಲವೇ ಕಾರ್ಪೊರೇಟ್ ಬಂಡವಾಳಿಗರಿಗೆ ಅನುಕೂಲ ಮಾಡಿಕೊಡುವಂತೆ ಈ ಬಜೆಟ್ ಇದೆ. ಉದಾಹರಣೆಗೆ ಟೆಲಿಕಾಂ ಉದ್ಯಮದ ಮೂಲಸೌಕರ್ಯಗಳನ್ನು ಒದಗಿಸುವವರಿಗೆ ನೀಡುವ ಪರಿಹಾರ 2023-24 ರಲ್ಲಿ 2,000 ಕೋಟಿ ರೂಪಾಯಿ ಇದ್ದರೆ, ಈ ಬಜೆಟ್‌ನಲ್ಲಿ 28,400 ಕೋಟಿ ರೂಪಾಯಿ ಒದಗಿಸಿದ್ದಾರೆ.

ಚುನಾವಣೆಯ ಕಾರಣಕ್ಕಾಗಿ ಬಜೆಟ್‌ನಲ್ಲಿ 3-4 ಬಾರಿ ಬಿಹಾರದ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹಾಗಾಗಿ, ಈ ಬಜೆಟ್ ಅನ್ನೂ ಅಂಬಾನಿ ಬಜೆಟ್ ಮತ್ತು ಬಿಹಾರ್ ಬಜೆಟ್ ಎಂದು ಹೇಳಬಹುದು.

ಆದರೆ, ನಮ್ಮ ಕರ್ನಾಟಕದ ಚುನಾವಣೆಗಿಂತ ಮೊದಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಹೇಳಿ ನಮ್ಮ ರಾಜ್ಯದ ಜನರಿಗೆ ಕೈಗೆ ಚೊಂಬು ಕೊಟ್ಟು ತಲೆಗೆ ಟೋಪಿ ಹಾಕಿದಂತೆ ಬಿಹಾರದ ಜನರಿಗೂ ಮಾಡುತ್ತಾರೆ. ನಮ್ಮಂತೆ ಬಿಹಾರದ ಜನರು ಮೋಸ ಹೋಗ ಬಾರದೆಂದು ಮನವಿ ಮಾಡುತ್ತೇನೆ.

ಬಜೆಟ್ ಭಾಷಣದಲ್ಲಿ ಗಿಗ್ ಕಾರ್ಮಿಕರು, ಯುವಕರು, ಮಹಿಳೆಯರು ಮುಂತಾದವರ ಬಗ್ಗೆ ಪ್ರಸ್ತಾಪ ಮಾಡಿದರು. ಆದರೆ ಈ ವರ್ಗಗಳಿಗೆ ನಯಾಪೈಸೆಯಷ್ಟೂ ಅನುದಾನವನ್ನು ಒದಗಿಸಿಲ್ಲ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಈ ಬಜೆಟ್‌ನಲ್ಲಿ ಎಂ.ಎಸ್.ಎಂ.ಇ. ಗಳನ್ನು ಉದ್ಧಾರ ಮಾಡು ವುದಾಗಿ ಭಾಷಣ ಮಾಡಿದರು. ಆದರೆ, ಹಿಂದೆ ಕೊಡುತ್ತಿದ್ದ ಅನುದಾನವನ್ನು ಸಹ ಈ ವಲಯಕ್ಕೆ ಕಡಿತಗೊಳಿಸಿದ್ದಾರೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳವರಿಗೆ ನೀಡುವ ಸಾಲದ ಪ್ರಮಾಣ 2023-24 ರಲ್ಲಿ 14,000 ಕೋಟಿ ರೂ. ಇದ್ದರೆ, ಈಗ 9,000 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಎಂ.ಎಸ್. ಎಂ.ಇ. ಗಳ ನಿರ್ವಹಣೆಯನ್ನು ಉತ್ತಮಗೊಳಿಸುವುದಕ್ಕಾಗಿ 2023-24 ರಲ್ಲಿ 1,320 ಕೋಟಿ ಒದಗಿಸಿದ್ದರೆ ಈಗ 180 ಕೋಟಿ ಹೆಚ್ಚು ಮಾಡಿ, 1,500 ಕೋಟಿ ರೂಪಾಯಿಗಳನ್ನು ಒದಗಿಸಿದ್ದಾರೆ. ಇಷ್ಟನ್ನು ಬಿಟ್ಟರೆ ಎಂ.ಎಸ್.ಎಂ.ಇ. ಗಳ ಉಲ್ಲೇಖವೇ ಇಲ್ಲ.

ಮಧ್ಯಮ ವರ್ಗದ ಜನರ ಹಿತರಕ್ಷಣೆಗಾಗಿ ತೆರಿಗೆ ಕಡಿತ ಮಾಡುವುದಾಗಿ ಹೇಳಿದ್ದಾರೆ. ಆದರೆ, ಎಲ್.ಐ.ಸಿ. ಯಂತಹ ಮಧ್ಯಮ ವರ್ಗದ ಜನರ ವಿಮಾ ಸಂಸ್ಥೆಗಳನ್ನು ಸಂಪೂರ್ಣ ಖಾಸಗೀಕರಿಸಿ ಬಂಡವಾಳಿಗರ ಕೈಗೆ ಕೊಡುವ ಮಹಾದ್ರೋಹವನ್ನು ಮಾಡುವುದಾಗಿ ಈ ಬಜೆಟ್‌ನಲ್ಲಿ ಪ್ರಸ್ತಾ ಪಿಸಿದ್ದಾರೆ.

ಹಾಗಾಗಿ ಈ ಬಜೆಟ್, ದುಡಿಯುವ ಜನರ ಪಾಲಿಗೆ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ.

2024-25ನೇ ಸಾಲಿಗೆ ದೇಶದ ಆರ್ಥಿಕ ಪ್ರಗತಿಯು 6.4ರಷ್ಟು ತಲುಪಲಿದೆ ಎಂದು ತಿಳಿಸಲಾಗಿದೆ. ಆದರೆ ಪ್ರಸಕ್ತ ವರ್ಷದಲ್ಲಿ ಉತ್ತಮ ಮುಂಗಾರು ಹಾಗು ಯಾವುದೇ ಆತಂಕಕಾರಿ ಜಾಗತಿಕ ಆರ್ಥಿಕ ಪರಿಣಾಮ ಉಂಟಾಗಿರುವುದಿಲ್ಲ ಆದರೂ ಸಹ ದೇಶದ ಜಿ.ಡಿ.ಪಿಯಲ್ಲಿ ಇಳಿಕೆಯಾಗಿರುವುದು ಕಳವಳಕಾರಿಯಾಗಿದೆ.

ವಿಕಸಿತ್‌ ಭಾರತ್‌ ಎಂದು ಆಯವ್ಯಯದಲ್ಲಿ ಘೋಷಿಸಿದ ವಿತ್ತ ಮಂತ್ರಿಯವರು ಆರ್ಥಿಕ ಪ್ರಗತಿಗೆ ಪೂರಕವಾಗಿರುವ ಬಂಡವಾಳ ವೆಚ್ಚದಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

2024-25ನೇ ಸಾಲಿನಲ್ಲಿ 11.11 ಲಕ್ಷ ಕೋಟಿ ಬಂಡವಾಳ ವೆಚ್ಚವನ್ನು ಅಂದಾಜಿಸಿಲಾಗಿತ್ತು. 2025-26ನೇ ಸಾಲಿಗೆ 11.21 ಲಕ್ಷ ಕೋಟಿ ಅಂದಾಜಿಸಲಾಗಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಬಂಡವಾಳ ವೆಚ್ವವನ್ನು ಶೇ.10.28ರಷ್ಟು ಆಯವ್ಯಯ ಅಂದಾಜಿಗಿಂತ ಶೇ.8.3ರಷ್ಟು ಕಡಿಮೆ ಯಾಗಿದೆ. ಅಲ್ಲದೆ ರಾಜ್ಯಗಳಿಗೆ ನೀಡುವ ʼಬಂಡವಾಳ ಯೋಜನೆಗಳಿಗೆ ವಿಶೇಷ ನೆರವು ಯೋಜನೆʼಗೆ ನೀಡುವ ಅನುದಾನದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. 2025-26ನೇ ಸಾಲಿಗೂ 1.5 ಲಕ್ಷ ಕೋಟಿ ಅನುದಾನ ಅಂದಾಜಿಸಲಾಗಿದೆ.

ಈ ಆಯವ್ಯಯದಲ್ಲಿ ಬಹುತೇಕ ಘೋಷಣೆಗಳು ಎನ್.ಡಿ.ಎ ಮಿತ್ರ ಪಕ್ಷವಾದ ಬಿಹಾರ ರಾಜ್ಯದ ಕೇಂದ್ರಿತವಾಗಿದೆ.

ಬಿಹಾರ ರಾಜ್ಯದಲ್ಲಿ Makhana Board, National Institute of Food Technology ಸ್ಥಾಪನೆ ಹಾಗು IIT Patna ಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಅಸ್ಸಾಂ ರಾಜ್ಯದಲ್ಲಿ Urea Plant ಸ್ಥಾಪನೆ ಮಾಡು ವುದಾಗಿ ಹೇಳಲಾಗಿದೆ.

ಕರ್ನಾಟಕ ರಾಜ್ಯದ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು 2023-24ರ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನವನ್ನು ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಯಾವುದೇ ಅನುದಾನವನ್ನು ನೀಡಿರುವುದಿಲ್ಲ. ಅದೇ ರೀತಿ ಬಿಹಾರದ ಜನತೆಗೂ ನೀಡಿರುವ ಭರವಸೆಯೂ ಹುಸಿಯಾಗುವ ಸಾಧ್ಯತೆ ಹೆಚ್ಚಿದೆ.

ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರ ವಿತ್ತ ಮಂತ್ರಿಯವರಿಗೆ ರಾಜ್ಯ ದ ಅಭಿವೃದ್ಧಿಗೆ ಹಾಗು ಜನಸಮಾನ್ಯರ ಅನುಕೂಲಕ್ಕಾಗಿ ಈ ಕೆಳಕಂಡ ಮನವಿಗಳನ್ನು ಸಲ್ಲಿಸಿತ್ತು.

✓ ಆಶಾ, ಆಂಗನವಾಡಿ ಕಾರ್ಯಕರ್ತರಿಗೆ ನೀಡುವ ಗೌರವಧನ ಹೆಚ್ಚಳ

✓ ಸಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ

✓ ಪ್ರಧಾನ ಮಂತ್ರಿ ಜನ್‌ ಆರೋಗ್ಯ ಯೋಜನೆಯಲ್ಲಿ BPL ಕಾರ್ಡ್‌ ಹೊಂದಿರುವ ಎಲ್ಲ ಕುಟುಂಬಗಳಿಗೂ ಅನುಕೂಲ ಒದಗಿಸಬೇಕು

✓ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಲ್ಲಿ ಫಲಾನುಭವಿ ವಂತಿಕೆಯನ್ನು ಹೆಚ್ಚಿಸುವುದು

✓ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತು ಪಶ್ಚಿಮ ಘಟ್ಟ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದು

✓ ಕೃಷ್ಣ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು

✓ ರಸ್ತೆ ಮತ್ತು ರೈಲು ಸಂಪರ್ಕ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವುದು

✓ ರಾಜ್ಯಕ್ಕೆ ಕೇಂದ್ರ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ ವಿಶೇಷ ಅನುದಾನ 5,495 ಕೋಟಿ ರೂ.ಗಳು ಹಾಗು ರಾಜ್ಯ ಕೇಂದ್ರಿತ ಅನುದಾನ 6,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೋರಲಾಗಿತ್ತು.

✓ ವಿಪತ್ತು ಪರಿಹಾರ ಅನುದಾನವನ್ನು ಹೆಚ್ಚಿಸುವಂತೆ ಕೇಳಲಾಗಿತ್ತು.

ಆದರೆ ಕೇಂದ್ರ ಸರ್ಕಾರವು ರಾಜ್ಯದ ಯಾವುದೇ ಮನವಿಯನ್ನು ಪುರಸ್ಕರಿಸಿರುವುದಿಲ್ಲ.

ಬೆಂಗಳೂರು ಉಪನಗರ ರೈಲು ಯೋಜನೆ (BSRP) ಗೆ ನೇರ ಅನುದಾನ ಘೋಷಣೆ ಆಗಿಲ್ಲ, ಇದು ಬೆಂಗಳೂರಿನ ಸಾರಿಗೆ ಸಮಸ್ಯೆ ಪರಿಹಾರಕ್ಕೆ ದೊಡ್ಡ ಹಿನ್ನಡೆ.

ಸ್ಮಾರ್ಟ್ ಸಿಟಿ ಮತ್ತು ಮೆಟ್ರೋ ರೈಲು ವಿಸ್ತರಣೆ: ನಗರಾಭಿವೃದ್ಧಿ ನಿಧಿ (Urban Challenge Fund - ₹1 ಲಕ್ಷ ಕೋಟಿ) ಘೋಷಣೆ ಮಾಡಲಾಗಿದೆ, ಆದರೆ ಬೆಂಗಳೂರು ಮೆಟ್ರೋ ಹಂತ-3 ಮತ್ತು Peripheral Ring Road ಕಾಮಗಾರಿಗೆ ಯಾವುದೇ ಅನುದಾನ ಇಲ್ಲ.

ಮುಂಬೈ, ದೆಹಲಿ ಮೆಟ್ರೋ ವಿಸ್ತರಣೆಗೆ ಆಯವ್ಯಯದಲ್ಲಿ ಅನುದಾನ ಮೀಸಲಿಡಲಾಗಿದೆ ಆದರೆ ಬೆಂಗಳೂರು ಮೆಟ್ರೋಗೆ ಯಾವುದೇ ಅನುದಾನ ನೀಡಿಲ್ಲ.

ಐಟಿ-ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಸ್ಪಷ್ಟ ಯೋಜನೆಗಳಿಲ್ಲ.

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ – ಕಡಿಮೆ ಉತ್ಪಾದನಾ ಸಾಮರ್ಥ್ಯ ಇರುವ 100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ಯೋಜನೆ ಘೋಷಿಸಲಾಗಿದೆ. ಆದರೆ, ಕರ್ನಾಟಕದ ಬರಗಾಲ ಪೀಡಿತ ಜಿಲ್ಲೆ ಗಳಿಗೆ ಯಾವುದೇ ವಿಶೇಷ ಅನುದಾನ ಘೋಷಣೆ ಮಾಡಿರುವುದಿಲ್ಲ.

ಕರ್ನಾಟಕ ರಾಜ್ಯವು 2023-24 ಹಾಗು 2024-25ನೇ ಸಾಲಿನಲ್ಲಿ ಅನಾವೃಷ್ಟಿ ಮತ್ತು ಅತಿವೃಷ್ಟಿ ಯಿಂದ ಪರಿತಪಿಸಬೇಕಾಯಿತು ಆದರೆ ವಿಪತ್ತು ಪರಿಹಾರಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಯಾವುದೇ ಸ್ಪಷ್ಟ ಯೋಜನೆ ಇಲ್ಲ. ಈ ಆಯವ್ಯಯದ ಮುಖ್ಯಂಶಾಗಳು ಕೆಳಕಂಡಂತಿದೆ.

ಕೇಂದ್ರದ ತೆರಿಗೆ ಸ್ವೀಕೃತಿಯು (Gross Tax Revenue) 42.70 ಲಕ್ಷ ಕೋಟಿ ರೂ.ಗಳು ಎಂದು ಅಂದಾ ಜಿಸಲಾಗಿದ್ದು, ಇದರಲ್ಲಿ ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 14.22 ಲಕ್ಷ ಕೋಟಿ ರೂ.ಗಳನ್ನು ನೀಡ ಲಾಗಿದೆ. 2025-26ನೇ ಸಾಲಿಗೆ ಕರ್ನಾಟಕ ರಾಜ್ಯಕ್ಕೆ 51,877 ಕೋಟಿ ರೂ.ಗಳನ್ನು ತೆರಿಗೆ ಪಾಲನ್ನು ಅಂದಾಜಿಸಲಾಗಿದೆ.

ಕೇಂದ್ರದ ರಾಜಸ್ವ ವೆಚ್ಚವು 39.44 ಲಕ್ಷ ಕೋಟಿ ರೂ.ಗಳು ಹಾಗು ಬಂಡವಾಳ ವೆಚ್ಚವು 11.12 ಲಕ್ಷ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. 2024-25ನೇ ಸಾಲಿನ ಆಯವ್ಯಯ ಅಂದಾಜಿಗೆ ಹೋಲಿಸಿದರೆ ಬಂಡವಾಳ ವೆಚ್ಚವು ಕೇವಲ 0.9ರಷ್ಟು ಮಾತ್ರ ಹೆಚ್ಚಳವಾಗಿದೆ.

2024-25ರ ಪರಿಷ್ಕೃತ ಅಂದಾಜಿನಲ್ಲಿ ಬಂಡವಾಳ ವೆಚ್ವವು ಕಡಿಮೆಯಾಗಿದ್ದು, ಆಯವ್ಯಯ ಅಂದಾಜಿಗಿಂತ ಶೇ.8.3ರಷ್ಟು ಕಡಿಮೆಯಾಗಿದೆ.

2024-25ನೇ ಸಾಲಿಗೆ 15.6 ಲಕ್ಷ ಕೋಟಿ ರೂ.ಗಳ ಸಾಲವನ್ನು ಅಂದಾಜಿಸಲಾಗಿದೆ.

ವಿತ್ತೀಯ ಕೊರತೆಯು ಜಿ.ಡಿ.ಪಿಯ ಶೇ.4.4ರಷ್ಟು ಹಾಗು ರಾಜಸ್ವ ಕೊರತೆಯು ಜಿ.ಡಿ.ಪಿಯ ಶೇ.1.5ರಷ್ಟು ಎಂದು ಅಂದಾಜಿಸಲಾಗಿದೆ.

ರಾಜ್ಯಗಳಲ್ಲಿ ಬಂಡವಾಳ ವೆಚ್ಚವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸಾಲದ ರೂಪದಲ್ಲಿ ವಿಶೇಷ ನೆರವನ್ನು 2024-25ನೇ ಸಾಲಿನ ಪರಿಷ್ಕೃತ ಅಂದಾಜಿನಲ್ಲಿ 25,000 ಕೋಟಿ ಕಡಿಮೆ ಮಾಡಲಾಗಿದೆ.

2024-25ರ ಆಯವ್ಯಯ ಅಂದಾಜಿಗೆ ಹೋಲಿಸಿದರೆ ಪರಿಷ್ಕೃತ ಅಂದಾಜಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ನೀಡುವ ಸಹಾಯಾನುದಾನವನ್ನು ಶೇ.18ರಷ್ಟು ಕಡಿಮೆ ಮಾಡಲಾಗಿದೆ.

ಕೇಂದ್ರ ಸರ್ಕಾರ ನೀಡುವ ಸಹಾಯಧನ – ಆಹಾರ, ಗೊಬ್ಬರದಲ್ಲಿ ಯಾವುದೇ ಹೆಚ್ಚಳ ನೀಡಿಲ್ಲ.

ಗ್ರಾಮೀಣ ಭಾಗದ ಜನರಿಗೆ ಅನುಕೂಲ ಒದಗಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುದಾನ ದಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್