ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today 2026: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಚಿನ್ನದ ದರದಲ್ಲಿ ಭಾರೀ ಏರಿಕೆ; ಬೆಲೆ ಇಲ್ಲಿದೆ ನೋಡಿ

Gold Price Today: ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದು ಚಿನ್ನಕೊಳ್ಳುವವರಿಗೆ ಶಾಕ್‌ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,710 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 16,048 ರೂ. ಆಗಿದೆ.

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದು ಚಿನ್ನಕೊಳ್ಳುವವರಿಗೆ ಶಾಕ್‌ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿಂದು ಏರಿಕೆ (Gold Price Today On August 21st 2026) ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 110 ರೂ. ಏರಿಕೆಯಾಗಿ 14,710 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿಂದು 121 ರೂ. ಏರಿಕೆಯಾಗಿ 16,048 ರೂ. ಆಗಿದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,710 ರೂ. 16,048 ರೂ.
ಮುಂಬೈ 14,710 ರೂ. 16,048 ರೂ.
ದೆಹಲಿ 14,710 ರೂ. 16,048 ರೂ.
ಕೋಲ್ಕತಾ 14,710 ರೂ. 16,048 ರೂ.
ಹೈದರಾಬಾದ್‌ 14,710 ರೂ. 16,048 ರೂ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,17,680 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,47,100 ರುಪಾಯಿ ಹಾಗೂ 100 ಗ್ರಾಂಗೆ 14,71,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,28,384 ರುಪಾಯಿ, 10 ಗ್ರಾಂಗೆ 1,60,480 ರುಪಾಯಿ ಹಾಗೂ 100 ಗ್ರಾಂಗೆ 16,04,800 ರುಪಾಯಿ ಇದೆ.

ಇತ್ತ ಬೆಳ್ಳಿ ದರದಲ್ಲಿಯೂ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 260 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2,60,000 ರುಪಾಯಿ ಇದೆ.

Vishakha Bhat Heggar

View all posts by this author