ಬೆಂಗಳೂರು, ಫೆ. 17: ಆಭರಣ ಪ್ರಿಯರಿಗೆ ಇಂದು ಶುಭ ಮಂಗಳವಾರ. ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆಯಲ್ಲಿ ಫೆಬ್ರವರಿ 17ರಂದು ಭಾರಿ ಇಳಿಕೆಯಾಗಿದೆ (Gold Price Today On 17th February 2026). ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 140 ರುಪಾಯಿ ಇಳಿಕೆಯಾಗಿ 14,200 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 153 ರುಪಾಯಿ ಅಗ್ಗವಾಗಿದ್ದು 15,491 ರುಪಾಯಿ ಇದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,600 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,42,000 ರುಪಾಯಿ ಹಾಗೂ 100 ಗ್ರಾಂಗೆ ನೀವು 14,20,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,23,928 ರುಪಾಯಿ ಹಾಗೂ 10 ಗ್ರಾಂಗೆ ನೀವು 1,54,910 ರುಪಾಯಿ ಹಾಗೂ 100 ಗ್ರಾಂಗೆ ನೀವು 15,49,100 ರುಪಾಯಿ ನೀಡಬೇಕಾಗುತ್ತದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,200 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,491 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,215 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,506 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,200 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,491 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,200 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,491 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,200 ರುಪಾಯಿ | 15,491 ರುಪಾಯಿ |
| ಮುಂಬೈ | 14,200 ರುಪಾಯಿ | 15,491 ರುಪಾಯಿ |
| ದೆಹಲಿ | 14,215 ರುಪಾಯಿ | 15,506 ರುಪಾಯಿ |
| ಕೋಲ್ಕತ್ತಾ | 14,200 ರುಪಾಯಿ | 15,491 ರುಪಾಯಿ |
| ಹೈದರಾಬಾದ್ | 14,200 ರುಪಾಯಿ | 15,491 ರುಪಾಯಿ |
ಸಾವು, ಮದುವೆ, ಹಬ್ಬದ ವೇಳೆ ಸಾಲ ವಸೂಲಿ ಮಾಡುವಂತಿಲ್ಲ: ಲೋನ್ ರಿಕವರಿ ಏಜೆಂಟರ ಕಿರುಕುಳಕ್ಕೆ ಆರ್‌ಬಿಐ ಬ್ರೇಕ್
ಬೆಳ್ಳಿ ದರ
ಬೆಳ್ಳಿ ದರದಲ್ಲಿಯೂ ಇಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 8 ರುಪಾಯಿ ಕಡಿಮೆಯಾಗಿದ್ದು, 260 ರುಪಾಯಿಗೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿ ಬೆಳ್ಳಿಗೆ ನೀವು 2,60,000 ರುಪಾಯಿ ಪಾವತಿಸಬೇಕು.