ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 8th April 2026: ಇರಾನ್‌-ಅಮೆರಿಕ ಕದನ ವಿರಾಮ ಬೆನ್ನಲ್ಲೇ ಚಿನ್ನದ ದರದಲ್ಲಿ ಭಾರಿ ಏರಿಕೆ

Gold Silver Price Today: ಬುಧವಾರ (ಏಪ್ರಿಲ್‌ 8) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 365 ರುಪಾಯಿ ಹೆಚ್ಚಾಗಿದ್ದು14,100 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 398 ರುಪಾಯಿ ಅಧಿಕವಾಗಿದ್ದು, 15,382 ರುಪಾಯಿಗೆ ಬಂದು ತಲುಪಿದೆ.

ಚಿನ್ನದ ದರದಲ್ಲಿ ಭಾರಿ ಏರಿಕೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Apr 8, 2026 12:20 PM

ಬೆಂಗಳೂರು, ಏ. 8: ಜಾಗತಿಕ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಗೊಳಿಸಿದ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಅಮೆರಿಕ ಮತ್ತು ಇರಾನ್‌ 2 ವಾರಗಳ ಕದನ ವಿರಾಮ ಘೋಷಿಸಿವೆ. ಇದರ ಬೆನ್ನಲ್ಲೇ ಭಾರತದಲ್ಲಿ ಚಿನ್ನದ ಬೆಲೆ ಜಿಗಿತುಕೊಂಡಿದೆ. ಬುಧವಾರ (ಏಪ್ರಿಲ್‌ 8) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ (Gold Price Today On 8th April 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 365 ರುಪಾಯಿ ಹೆಚ್ಚಾಗಿದ್ದು14,100 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 398 ರುಪಾಯಿ ಅಧಿಕವಾಗಿದ್ದು, 15,382 ರುಪಾಯಿಗೆ ಬಂದು ತಲುಪಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,12,800 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,41,000 ರುಪಾಯಿ ಹಾಗೂ 100 ಗ್ರಾಂಗೆ 14,10,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,23,056 ರುಪಾಯಿ, 10 ಗ್ರಾಂಗೆ 1,53,820 ರುಪಾಯಿ ಹಾಗೂ 100 ಗ್ರಾಂಗೆ 15,38,200 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,200 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,491 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,100 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,382 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,115 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,397 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,100 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,382 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,100 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,382 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,200 ರುಪಾಯಿ 15,491 ರುಪಾಯಿ
ಮುಂಬೈ 14,100 ರುಪಾಯಿ 15,382 ರುಪಾಯಿ
ದೆಹಲಿ 14,115 ರುಪಾಯಿ 15,397 ರುಪಾಯಿ
ಕೋಲ್ಕತ್ತಾ 14,100 ರುಪಾಯಿ 15,382 ರುಪಾಯಿ
ಹೈದರಾಬಾದ್‌ 14,100 ರುಪಾಯಿ 15,382 ರುಪಾಯಿ

ಶೇಕಡಾ 5.25ರಲ್ಲಿಯೇ ಮುಂದುವರಿಯಲಿದೆ ರೆಪೋ ದರ; ಆರ್‌ಬಿಐಯಿಂದ ಘೋಷಣೆ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 10 ರುಪಾಯಿ ಅಧಿಕವಾಗಿದ್ದು 260 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2, 60,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.