Saturday, 14th December 2024

Gold Rate: ಗೌರಿ ಹಬ್ಬದಂದೇ ಬೆಲೆ ಏರಿಕೆ ಬಿಸಿ; ಚಿನ್ನ ಇಂದು ಇಷ್ಟು ದುಬಾರಿ

ಬೆಂಗಳೂರು: ರಾಜ್ಯಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆ ಮಾಡಿದರೆ ಇತ್ತ ಚಿನ್ನದ ದರ ಏರಿಕೆಯಾಗಿ ಗ್ರಾಹಕರಿಗೆ ಶಾಕ್‌ ನೀಡಿದೆ (Gold Rate). ಇಂದು (ಸೆಪ್ಟೆಂಬರ್ 6) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 51 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 56 ರೂ. ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ಕುಸಿದಿದ್ದ ಚಿನ್ನದ ಬೆಲೆ ಏಕಾಏಕಿ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇಂದು  22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,720 ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,331 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 53,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 67,200 ರೂ. ಮತ್ತು 100 ಗ್ರಾಂಗೆ 6,72,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 58,648 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,310 ರೂ. ಮತ್ತು 100 ಗ್ರಾಂಗೆ 7,33,100 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

 ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಬೆಂಗಳೂರು 6,720 ರೂ. 7,331 ರೂ.
ದೆಹಲಿ 6,735 ರೂ. 7,346 ರೂ.
ಮುಂಬೈ 6,720 ರೂ. 7,331 ರೂ.
ಚೆನ್ನೈ 6,720 ರೂ. 7,331 ರೂ.
ಹೈದರಾಬಾದ್ 6,720 ರೂ. 7,331 ರೂ.

ಬೆಳ್ಳಿ ಬೆಲೆ

ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ 1 ಗ್ರಾಂಗೆ 85 ರೂ. ಇದೆ. 8 ಗ್ರಾಂಗೆ 680 ರೂ., 10 ಗ್ರಾಂಗೆ 850 ರೂ. ಮತ್ತು 1 ಕೆಜಿಗೆ 85,000 ರೂ. ಪಾವತಿಸಬೇಕಾಗುತ್ತದೆ.

ಚಿನ್ನದ ಬೆಲೆ ಏರಿಕೆಗೆ ಕಾರಣ

ಭಾರತದಲ್ಲಿ ಚಿನ್ನದ ದರ ಪ್ರತಿ ದಿನ ಏರಳಿತವಾಗುತ್ತಲೇ ಇರುತ್ತದೆ. ಅದರಲ್ಲಿಯೂ ಚಿನ್ನದ ಬೆಲೆ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾದುದು ಯಾವುವು ಎನ್ನುವುದನ್ನು ನೋಡೋಣ.

ಬೇಡಿಕೆ ಮತ್ತು ಪೂರೈಕೆ: ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರ ವೃದ್ಧಿಯಾಗುತ್ತದೆ. ಅದೇ ರೀತಿ ಪೂರೈಕೆಯಲ್ಲಿನ ಅಡೆತಡೆಗಳು ಕೂಡ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಸರ್ಕಾರದ ನೀತಿ: ಸರ್ಕಾರ ಆಮದು ಸುಂಕ, ತೆರಿಗೆ ಹೆಚ್ಚಿಸಿದರೆ ಚಿನ್ನದ ಬೆಲೆಯಲ್ಲಿಯೂ ಏರಿಕೆಯಾಗುತ್ತದೆ. ಹಣದುಬ್ಬರಕ್ಕೆ ಸಂಬಂಧಿಸಿದ ಸರ್ಕಾರದ ನೀತಿಗಳು ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತದೆ. ಸರ್ಕಾರಗಳ ದೊಡ್ಡ ಪ್ರಮಾಣದ ಖರೀದಿ ಅಥವಾ ಮಾರಾಟವು ಚಿನ್ನದ ಮಾರುಕಟ್ಟೆಯಲ್ಲಿ ಅಲೆಗಳನ್ನು ಸೃಷ್ಟಿಸುತ್ತದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ (RBI) ತೆಗೆದಿರಿಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ವೃದ್ಧಿಗೆ ದಾರಿ ಮಾಡಿಕೊಡುತ್ತದೆ.

ಈ ಸುದ್ದಿಯನ್ನೂ ಓದಿ: Reliance Jio: ರಿಲಯನ್ಸ್ ಜಿಯೊ ವಾರ್ಷಿಕೋತ್ಸವ ಆಫರ್; ಆಯ್ದ ರೀಚಾರ್ಜ್‌ ಮೇಲೆ 700 ರೂ. ಮೌಲ್ಯದ ಬೆನಿಫಿಟ್‌