Friday, 22nd November 2024

Gold Rate: ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ- ಇಂದಿನ ಬೆಲೆ ಹೇಗಿದೆ ನೋಡಿ

Gold rate

ಬೆಂಗಳೂರು: ಗೌರಿ ಗಣೇಶ ಹಬ್ಬದ ಶುರುವಾದಾಗಿನಿಂದಲೂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡು ಬಂದಿದೆ. ಶನಿವಾರ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದ್ದ ಚಿನ್ನದ ದರ ನಿನ್ನೆ ಮತ್ತು ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate). ಶನಿವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಮತ್ತು ಚಿನ್ನದ ಬೆಲೆ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 44 ರೂ. ಕಡಿಮೆಯಾಗಿದ್ದು, ನಿನ್ನೆ ಯಾವುದೇ ಏರಳಿತ ಕಂಡು ಬಂದಿಲ್ಲ. ಭಾನುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,680 ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,287 ರೂ. ಇತ್ತು. ಇಂದು ಕೂಡ ಅದೇ ದರವನ್ನು ಕಾಯ್ದುಕೊಂಡಿದ್ದು, ಸ್ವರ್ಣ ಪ್ರಿಯರ ಸಂತಸ ದುಪ್ಪಟ್ಟಾದಂತಾಗಿದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ53,440 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 66,800 ರೂ. ಮತ್ತು 100 ಗ್ರಾಂಗೆ 6,68,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 58,296 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,870 ರೂ. ಮತ್ತು 100 ಗ್ರಾಂಗೆ 7,28,700 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

 ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
 ಬೆಂಗಳೂರು 6,680 ರೂ. 7,287 ರೂ.
 ದೆಹಲಿ 6,695 ರೂ. 7,3026 ರೂ.
 ಮುಂಬೈ 6,680 ರೂ. 7,287 ರೂ.
 ಚೆನ್ನೈ 6,680 ರೂ. 7,287 ರೂ.
 ಹೈದರಾಬಾದ್ 6,680 ರೂ. 7,287 ರೂ.

ಬೆಳ್ಳಿ ಬೆಲೆ

ಇತ್ತ ಬೆಳ್ಳಿ ಬೆಲೆಯಲ್ಲಿ ಕೊಂಚ ಮಟ್ಟಿನ ಏರಿಕೆ ಕಂಡುಬಂದಿದ್ದು, ಬೆಳ್ಳಿ 1 ಗ್ರಾಂಗೆ 85 ರೂ. ಇದೆ. 8 ಗ್ರಾಂಗೆ 680 ರೂ., 10 ಗ್ರಾಂಗೆ 850 ರೂ. ಮತ್ತು 1 ಕೆಜಿಗೆ 85,000 ರೂ. ಪಾವತಿಸಬೇಕಾಗುತ್ತದೆ.

ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ

ಶುದ್ಧತೆ ಪರಿಶೀಲಿಸಿ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್‌ (BIS) ಹಾಲ್‌ಮಾರ್ಕ್‌ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.

ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್  ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.

ಹೋಲಿಕೆ ಮಾಡಿ: ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ.  ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ (Making Charges) ಮತ್ತು ವೇಸ್ಟೇಜ್ ಚಾರ್ಜ್ (Wastage Charges) ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.

ವಿನ್ಯಾಸ: ಮೊದಲೇ ಹೇಳಿದಂತೆ ಆಭರಣಗಳ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಸೂಕ್ಷ್ಮ ಕೆತ್ತನೆಯ, ಕೈಯಿಂದ ತಯಾರಿಸುವ ಆಭರಣ ಸ್ವಲ್ಪ ದುಬಾರಿಯಾಗಿತ್ತವೆ. ಆದ್ದರಿಂದ ಈ ಬಗ್ಗೆಯೂ ಗಮನ ಹರಿಸಿ.

ಈ ಸುದ್ದಿಯನ್ನೂ ಓದಿ: Money Tips: ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ