ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Rate Today 4th March 2026: ಯುದ್ಧ ಕಾರ್ಮೋಡದ ನಡುವೆ ಆಭರಣಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಮತ್ತೆ ಭಾರಿ ಇಳಿಕೆ

Gold Silver Rate Today: ಇದೀಗ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬರುತ್ತಿದೆ. ಬುಧವಾರ (ಮಾರ್ಚ್‌ 4) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 285 ರುಪಾಯಿ ಇಳಿಕೆಯಾಗಿ 15,080 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 311 ರುಪಾಯಿ ಕಡಿಮೆಯಾಗಿದ್ದು, 16,451 ರುಪಾಯಿ ಇದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ. 4: ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಂದು ಆರಂಭವಾದ ಯುದ್ಧ ದಿನ ಕಳೆದಂತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಮಧ್ಯೆ ತೈಲ ಸರಬರಾಜಿಗೆ ತಡೆ ಉಂಟಾಗಿ ಬೆಲೆ ಏರಿಕೆಯ ಭೀತಿ ಮೂಡಿದೆ. ಅದಕ್ಕೆ ತದ್ವಿರುದ್ಧವಾಗಿ ಇದೀಗ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬರುತ್ತಿದೆ (Gold Rate Today 3rd March 2026). ಬುಧವಾರ (ಮಾರ್ಚ್‌ 4) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 285 ರುಪಾಯಿ ಇಳಿಕೆಯಾಗಿ 15,080 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 311 ರುಪಾಯಿ ಕಡಿಮೆಯಾಗಿದ್ದು, 16,451 ರುಪಾಯಿ ಇದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,640 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,50,800 ರುಪಾಯಿ ಹಾಗೂ 100 ಗ್ರಾಂಗೆ 15,08,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,31,608 ರುಪಾಯಿ ಹಾಗೂ 10 ಗ್ರಾಂಗೆ ನೀವು 1,64,510 ರುಪಾಯಿ ಹಾಗೂ 100 ಗ್ರಾಂಗೆ ನೀವು 17,00,200 ರುಪಾಯಿ ನೀಡಬೇಕಾಗುತ್ತದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,200 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,582 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,080 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,451 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,095 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,466 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,080 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,451 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,080 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,451 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 15,200 ರುಪಾಯಿ 16,582 ರುಪಾಯಿ
ಮುಂಬೈ 15,080 ರುಪಾಯಿ 16,451 ರುಪಾಯಿ
ದೆಹಲಿ 15,095 ರುಪಾಯಿ 16,466 ರುಪಾಯಿ
ಕೋಲ್ಕತ್ತಾ 15,080 ರುಪಾಯಿ 16,451 ರುಪಾಯಿ
ಹೈದರಾಬಾದ್‌ 15,080 ರುಪಾಯಿ 16,451 ರುಪಾಯಿ

ಹೊರ್ಮುಜ್‌ ಜಲಸಂಧಿ ಸ್ಥಗಿತಗೊಂಡರೂ ಭಾರತಕ್ಕಿಲ್ಲ ಸಮಸ್ಯೆ; 25 ದಿನಕ್ಕಾಗುವಷ್ಟು ಕಚ್ಚಾ ತೈಲ ದಾಸ್ತಾನಿದೆ ಎಂದ ಕೇಂದ್ರ

ಬೆಳ್ಳಿ ದರ

ಇತ್ತ ಬೆಳ್ಳಿ ದರವೂ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 10 ರುಪಾಯಿ ಕಡಿಮೆಯಾಗಿದ್ದು, 285 ರುಪಾಯಿಗೆ ತಲುಪಿದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಇದೆ.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author