ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʼʼರಾಜ್ಯದ ಬಾಕಿ ಅನುದಾನ ಶೀಘ್ರದಲ್ಲೇ ಬರಲಿದೆʼʼ: ಗುಡ್‌ನ್ಯೂಸ್‌ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

CM DK Shivakumar: ನವದೆಹಲಿಯಲ್ಲಿ ಗುರುವಾರ ಜಿಎಸ್‌ಟಿ ಕೌನ್ಸಿಲ್ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್‌, ನಮ್ಮ ರಾಜ್ಯದ ಹಳೆಯ ಬಾಕಿ ವಿಚಾರವಾಗಿ ನಾನು ವಿತ್ತ ಸಚಿವರೊಂದಿಗೆ ಚರ್ಚೆ ಮಾಡಿದ್ದು, ಕೆಲವು ಸಿಹಿ ಸುದ್ದಿ ಕೊಟ್ಟಿದ್ದಾರೆ. ನಾನು ಈಗ ಆ ಬಗ್ಗೆ ಹೇಳುವುದಿಲ್ಲ. ನಂತರ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)

ನವದೆಹಲಿ, ಅ. 8: ನಮ್ಮ ರಾಜ್ಯದ ಹಳೆಯ ಬಾಕಿ ವಿಚಾರವಾಗಿ ನಾನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆ ಚರ್ಚೆ ಮಾಡಿದ್ದು, ಸಿಹಿ ಸುದ್ದಿ ಕೊಟ್ಟಿದ್ದಾರೆ. ನಾನು ಈಗ ಆ ಬಗ್ಗೆ ಹೇಳುವುದಿಲ್ಲ. ನಂತರ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ (CM DK Shivakumar) ತಿಳಿಸಿದರು. ಜಿಎಸ್‌ಟಿ ಸಭೆ ಬಳಿಕ ಕರ್ನಾಟಕ ಭವನದಲ್ಲಿ ಗುರುವಾರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಜಿಎಸ್‌ಟಿ ಕೌನ್ಸಿಲ್ ಸಭೆ ಅತ್ಯುತ್ತಮವಾಗಿ ನಡೆಯಿತು. ಕರ್ನಾಟಕದ ಅಂಶಗಳನ್ನು ಎಲ್ಲರೂ ಒಪ್ಪಿದ್ದಾರೆ. ಜಿಎಸ್‌ಟಿ ಪಾವತಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸುವ ವಿಚಾರ ಪ್ರಸ್ತಾಪವಾಯಿತು. ಆದಾಯ ತೆರಿಗೆ ನಿಯಮ, ನಿಬಂಧನೆಗಳಂತೆ ಮಾಡಬೇಕು, ಅನಗತ್ಯವಾಗಿ ಅಧಿಕಾರಿಗಳು ವ್ಯಾಪಾರಸ್ಥರನ್ನು ಬಂಧಿಸುವುದು ಸರಿಯಲ್ಲ. ಅವರಿಂದ ಎಷ್ಟು ಕಟ್ಟಿಸಿಕೊಳ್ಳಬೇಕೋ ಅಷ್ಟು ಹಣ ಕಟ್ಟಿಸಿಕೊಳ್ಳೋಣ. ಬಂಧಿಸುವುದು ಸರಿಯಲ್ಲ ಎಂದು ಚರ್ಚೆಯಾಯಿತು. ಒಂದು ರಾಜ್ಯ ಬಿಟ್ಟರೆ ಉಳಿದ ರಾಜ್ಯಗಳು ಒಪ್ಪಿವೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.‌

ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರು ಎಂದು ಗೊತ್ತು; ಡಿಕೆಶಿ

ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಅವರು ಪ್ರತಿಕ್ರಿಯೆ ನೀಡಿದರು.

ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ ಎಚ್ಚರಿಕೆ ಬಗ್ಗೆ ಕೇಳಿದಾಗ, ಮಾರುವೇಷದ ಕಾರ್ಯಾಚರಣೆಗಳನ್ನು ನನ್ನ ಮೇಲಿಂದಲೇ ಶುರು ಮಾಡಲು ಪ್ರಯತ್ನ ಮಾಡಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲ ಸಾಕ್ಷ್ಯಗಳೂ ಇವೆ. ನಾನು ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಏನೇ ಮಾತನಾಡಬೇಕಾದರೂ ಸುಮ್ಮನೆ ಮಾತನಾಡುವುದಿಲ್ಲ ಎಂದಿದ್ದಾರೆ.

ಎನ್‌ಡಿಆರ್‌ಎಫ್ ಯೋಧರ ಮಾನಸಿಕ ಆರೋಗ್ಯಕ್ಕಾಗಿ 'ಪ್ರಾಜೆಕ್ಟ್ ನಿರ್ಮಲ್' ಜಾರಿ; ಏನಿದು ಯೋಜನೆ?

ಈ ಕಾರ್ಯಾಚರಣೆ ಸಿಎಂ ಆಗುವ ಮುನ್ನವೇ ಅಥವಾ ಸಿಎಂ ಆದ ಬಳಿಕ ನಡೆದಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಪ್ರಯತ್ನಗಳ ಬಗ್ಗೆ ಹೇಳುತ್ತಿದ್ದೇನೆ. ನನ್ನನ್ನು ಸೇರಿಸಿ ಬೇರೆ ಯಾವ, ಯಾವ ನಾಯಕರ ವಿರುದ್ಧ ಕಾರ್ಯಾಚರಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದೂ ತಿಳಿದಿದೆ. ಆದರೆ, ಈ ಎಲ್ಲ ವಿಚಾರಗಳನ್ನು ಈಗ ಬಹಿರಂಗವಾಗಿ ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.