ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ; ನ.6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆದಿದೆ. ವಿವಿಧ ಕ್ಷೇತ್ರಗಳ ಉದ್ಯಮಗಳು ಮತ್ತು ಹೂಡಿಕೆದಾರರಿಗೆ ನಗರವು ಅನೇಕ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಬೆಂಗಳೂರಿಗೆ ಬಂದಿರುವುದು ನಗರದ ಬೆಳೆಯುತ್ತಿರುವ ಉದ್ಯಮ ಲೋಕಕ್ಕೆ ಸ್ವಾಗತಾರ್ಹ ಸೇರ್ಪಡೆ. ಸಂಸ್ಥೆಗೆ ಮುಂದೆಯೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ

ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

-

Profile
Ashok Nayak Nov 5, 2026 8:00 PM

ಬೆಂಗಳೂರು: ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್‌, ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿ ಉದ್ಘಾಟಿಸುವ ಮೂಲಕ ರಾಜಧಾನಿಯಲ್ಲಿ ತನ್ನ ಅಧಿಕೃತ ಉಪಸ್ಥಿತಿಗೆ ಚಾಲನೆ ನೀಡಿದೆ. ನೂತನ ಕಚೇರಿಯನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(D K Shivakumar) ಉದ್ಘಾ ಟಿಸಿದರು. ಇದರ ಅಂಗವಾಗಿ, ನ.6, 7 ಮತ್ತು 8ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಅನ್ನು ಆಯೋಜಿಸ ಲಾಗಿದ್ದು, ಗ್ರಾಹಕರಿಗೆ ಆಯ್ದ ಯೋಜನೆಗಳನ್ನು ವಿಶೇಷ ದರಗಳಲ್ಲಿ ಖರೀದಿಸುವ ಅವಕಾಶವೂ ದೊರೆಯಲಿದೆ.

ಕನ್ನಿಂಗ್‌ಹ್ಯಾಮ್ ರಸ್ತೆ, ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ನೂತನ ಕಚೇರಿ ಕಾರ್ಯಾರಂಭ ಮಾಡಿದೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ರೋಹನ್ ಕಾರ್ಪೋರೇಶನ್‌ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದ್ದು, ಬೆಂಗಳೂರಿನ ಮನೆ ಖರೀದಿದಾರರು ಮತ್ತು ಹೂಡಿಕೆದಾರರಿಗೆ ತನ್ನ ರಿಯಲ್ ಎಸ್ಟೇಟ್ ಯೋಜನೆ ಗಳನ್ನು ಮತ್ತಷ್ಟು ಹತ್ತಿರದಿಂದ ಪರಿಚಯಿಸುವ ಅವಕಾಶ ಕಲ್ಪಿಸಿದೆ.

ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, "ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆದಿದೆ. ವಿವಿಧ ಕ್ಷೇತ್ರಗಳ ಉದ್ಯಮಗಳು ಮತ್ತು ಹೂಡಿಕೆದಾರರಿಗೆ ನಗರವು ಅನೇಕ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಬೆಂಗಳೂರಿಗೆ ಬಂದಿರುವುದು ನಗರದ ಬೆಳೆಯುತ್ತಿರುವ ಉದ್ಯಮ ಲೋಕಕ್ಕೆ ಸ್ವಾಗತಾರ್ಹ ಸೇರ್ಪಡೆ. ಸಂಸ್ಥೆಗೆ ಮುಂದೆಯೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ" ಎಂದರು..

ಇದನ್ನೂ ಓದಿ: CM DK Shivakumar: ಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧದಲ್ಲೇ ಚಿಕಿತ್ಸೆ

ಈ ಸಂದರ್ಭದಲ್ಲಿ ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ರೋಹನ್ ಮೊಂತೆರೊ ಅವರು, "ಬೆಂಗಳೂರಿನಲ್ಲಿ ನಮ್ಮ ಕಚೇರಿ ಆರಂಭಿಸಿರು ವುದು ಸಂಸ್ಥೆಗೆ ಮಹತ್ವದ ಹೆಜ್ಜೆಯಾಗಿದೆ. ನಮ್ಮ ಯೋಜನೆಗಳನ್ನು ಇಲ್ಲಿನ ಜನರಿಗೆ ಪರಿಚಯಿಸುವುದರ ಜೊತೆಗೆ, ಗ್ರಾಹಕರೊಂದಿಗೆ ವಿಶ್ವಾಸಪೂರ್ಣ ಸಂಬಂಧಗಳನ್ನು ಬೆಳೆಸಲು ಮತ್ತು ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಡಲು ನಾವು ಉತ್ಸುಕರಾಗಿದ್ದೇವೆ. ಇದು ನಮ್ಮ ಪಾಲಿಗೆ ಹೊಸ ಜವಾಬ್ದಾರಿ ಹಾಗೂ ಹೊಸ ಅವಕಾಶಗಳ ಆರಂಭವಾಗಿದೆ" ಎಂದು ತಿಳಿಸಿದರು.

ಸಂಸ್ಥೆಯ ಮುಂದಿನ ಯೋಜನೆಗಳ ಕುರಿತು ಮಾತನಾಡಿದ ನಿರ್ದೇಶಕ ಡಿಯಾನ್ ಮೊಂತೆರೊ ಅವರು, "ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿ ಮನೆ ಖರೀದಿದಾರರ ನಿರೀಕ್ಷೆಗಳು ಮತ್ತು ಜೀವನಶೈಲಿಯ ಅಗತ್ಯಗಳು ನಿರಂತರವಾಗಿ ಬದಲಾಗುತ್ತಿವೆ. ಈ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು, ಗ್ರಾಹಕರ ಅಗತ್ಯಗಳಿಗೆ ಹೊಂದಿಕೆಯಾಗುವ ಗುಣಮಟ್ಟದ ಯೋಜನೆಗಳನ್ನು ಪರಿಚಯಿಸುವುದು ನಮ್ಮ ಉದ್ದೇಶವಾಗಿದೆ.” ಎಂದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಹಾಗೂ ಬೆಂಗಳೂರು ಮಹಾಧರ್ಮಪ್ರಾಂತ್ಯದ ಸಹಾಯಕ ಬಿಷಪ್ ಡಾ. ಜೋಸೆಫ್ ಸುಸೈನಾಥನ್ ಅವರು, ಗಣ್ಯ ವ್ಯಕ್ತಿಗಳು ಮತ್ತು ಆಹ್ವಾನಿತ ಅತಿಥಿಗಳ ಉಪಸ್ಥಿತಿಯಲ್ಲಿ ಭಾಗವಹಿಸಿದ್ದರು. ನಿರೂಪಕಿ ರೀನಾ ಡಿಸೋಜಾ ಅವರು ಕಾರ್ಯಕ್ರಮ ನಿರೂಪಿಸಿದರು.

ರೋಹನ್ ಕಾರ್ಪೊರೇಶನ್ ನಿಂದ ಪ್ರಾಜೆಕ್ಟ್ ಎಕ್ಸಿಬಿಷನ್

ಬೆಂಗಳೂರಿನಲ್ಲಿನ ತನ್ನ ಕಾರ್ಯಾರಂಭದ ಅಂಗವಾಗಿ ರೋಹನ್ ಕಾರ್ಪೊರೇಶನ್ ನವೆಂಬರ್ 6, 7 ಮತ್ತು 8ರಂದು ತನ್ನ ನೂತನ ಕಚೇರಿಯಲ್ಲಿ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋ ಜಿಸಿದೆ. ಈ ಪ್ರದರ್ಶನದಲ್ಲಿ ಸಂಸ್ಥೆಯ ವಿವಿಧ ವಸತಿ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳನ್ನು ವೀಕ್ಷಿಸಲು, ಸಂಸ್ಥೆಯ ತಂಡದೊಂದಿಗೆ ನೇರವಾಗಿ ಸಂವಾದ ನಡೆಸಲು ಹಾಗೂ ತಮ್ಮ ಅಗತ್ಯಗಳಿಗೆ ಸೂಕ್ತವಾದ ಅವಕಾಶಗಳ ಬಗ್ಗೆ ಮಾಹಿತಿ ಪಡೆಯಲು ಗ್ರಾಹಕರಿಗೆ ಅವಕಾಶವಿದೆ. ವಿಶೇಷವಾಗಿ, ಆಯ್ದ ಯೋಜನೆಗಳನ್ನು ಆಕರ್ಷಕ ದರಗಳಲ್ಲಿ ಪಡೆಯುವ ಅವಕಾಶವೂ ಇರಲಿದೆ.

ಈ ವಿಸ್ತರಣೆಯೊಂದಿಗೆ ರೋಹನ್ ಕಾರ್ಪೊರೇಶನ್ ತನ್ನ ಬೆಳವಣಿಗೆಯ ಪಯಣದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, 1994ರಿಂದ ಗಳಿಸಿರುವ ನಂಬಿಕೆಯನ್ನು ಬೆಂಗಳೂರಿಗೂ ವಿಸ್ತರಿಸುತ್ತಾ, ಗುಣಮಟ್ಟದ ವಸತಿ ಮತ್ತು ವಾಣಿಜ್ಯ ಸ್ಥಳಗಳ ನಿರ್ಮಾಣದ ತನ್ನ ದೃಷ್ಟಿಕೋನ ವನ್ನು ಹೊಸ ಮಾರುಕಟ್ಟೆಗೆ ಕೊಂಡೊಯ್ಯುತ್ತಿದೆ.