ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶ್ರೀನಗರ ಏರ್‌ಪೋರ್ಟ್ ನಲ್ಲಿ ಕಂಬಕ್ಕೆ ಡಿಕ್ಕಿಯಾದ ಇಂಡಿಗೋ ವಿಮಾನ: ತಪ್ಪಿದ ಭಾರೀ ದುರಂತ

IndiGo flight: ಮುಂಬೈನಿಂದ ಶ್ರೀನಗರಕ್ಕೆ ತೆರಳಿದ್ದ ಇಂಡಿಗೋ ವಿಮಾನ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಇಂಡಿಗೋ ವಿಮಾನ 6ಇ 225 ಶುಕ್ರವಾರ ಬೆಳಗೆ 9 ಗಂಟೆ ಸುಮಾರಿಗೆ ಶ್ರೀನಗರ ವಿಮಾನ ನಿಲ್ದಾಣದ ಬೇ ಸಂಖ್ಯೆ 06 ರಲ್ಲಿ ವಿಡಿಜಿಎಸ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಶ್ರೀನಗರ: ಕಂಬಕ್ಕೆ ಇಂಡಿಗೋ ವಿಮಾನ ಡಿಕ್ಕಿ

ಸಂಗ್ರಹ ಚಿತ್ರ -

ಮುಂಬೈ: ಶ್ರೀನಗರ ವಿಮಾನ ನಿಲ್ದಾಣದಲ್ಲಿ (Srinagar airport) ಇಂಡಿಗೋ ವಿಮಾನವೊಂದು (IndiGo flight) ಕಂಬಕ್ಕೆ ಡಿಕ್ಕಿಯಾದ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ. ಇಂಡಿಗೋ ವಿಮಾನ 6ಇ 225 (IndiGo flight 6E 225) ನವಿ ಮುಂಬೈನಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿ ಲ್ಯಾಂಡಿಂಗ್ ವೇಳೆ ವಿಮಾನ ನಿಲ್ದಾಣದ ಬೇ ಸಂಖ್ಯೆ 06 ರಲ್ಲಿ ವಿಡಿಜಿಎಸ್ ಕಂಬಕ್ಕೆ ಡಿಕ್ಕಿಯಾಗಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಯಿತು. ಈ ಅಪಘಾತದಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಯಲ್ಲಿ ಯಾವುದೇ ಅಡಚಣೆ ಉಂಟಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ ಇಂಡಿಗೋ ವಿಮಾನ 6ಇ 225 ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದಕ್ಕೆ ನಿಖರವಾದ ಕಾರಣ ಏನೆಂದು ತಿಳಿಯಲು ಅಧಿಕಾರಿಗಳು ಸೂಕ್ತ ಕಾರ್ಯವಿಧಾನಗಳನ್ನು ಅನುಸರಿಸುತ್ತಿದ್ದಾರೆ.

57 ವರ್ಷಗಳ ಹಿಂದೂ-ಮುಸ್ಲಿಂ ಜಂಟಿ ಜನ್ಮಾಷ್ಟಮಿ ಆಚರಣೆಗೆ ಬಂಗಾಳದಲ್ಲಿ ಬ್ರೇಕ್; ಈ ಬಾರಿ ಹಿಂದೂಗಳಷ್ಟೇ ಭಾಗಿ!

ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರನ್ನು ಹಸ್ತಚಾಲಿತ ಮೆಟ್ಟಿಲುಗಳನ್ನು ಬಳಸಿ ವಿಮಾನದಿಂದ ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಅಪಘಾತಕ್ಕೆ ಕಾರಣ ಏನೆಂದು ತಿಳಿಸಲಾಗುವುದು. ಈ ಹಂತದಲ್ಲಿ ಯಾವುದೇ ತೀರ್ಮಾನವನ್ನು ಕೈಗೊಳ್ಳಲಾಗುವುದಿಲ್ಲ. ವಿಮಾನ ನಿಲ್ದಾಣಕ್ಕೆ ಬೇರೆ ವಿಮಾನಗಳ ಆಗಮನ ಮತ್ತು ನಿರ್ಗಮನಗಳು ನಿಗದಿತ ವೇಳಾಪಟ್ಟಿಯಂತೆ ಮುಂದುವರಿದಿದೆ ಎಂದು ಇಂಡಿಗೋ ತಿಳಿಸಿದೆ.



ಘಟನೆ ಕುರಿತು ಹೇಳಿಕೆ ನೀಡಿರುವ ವಿಮಾನ ನಿಲ್ದಾಣದ ಅಧಿಕಾರಿಗಳು, ಶ್ರೀನಗರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಇಂಡಿಗೋ ವಿಮಾನವು ಪಾರ್ಕಿಂಗ್ ಬೇಗೆ ಟ್ಯಾಕ್ಸಿ ಮಾಡುವಾಗ ವಿಷುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ (ವಿಡಿಜಿಎಸ್) ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣ ಅಪಘಾತವಾಗಿದೆ. ನವಿ ಮುಂಬೈನಿಂದ ಶ್ರೀನಗರಕ್ಕೆ ಈ ವಿಮಾನ ಆಗಮಿಸಿದ್ದು, ಬೇ ಸಂಖ್ಯೆ 06 ರಲ್ಲಿ ಈ ಅಪಘಾತ ಉಂಟಾಗಿದೆ ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಸಾಮಾನ್ಯವಾಗಿದೆ. ಶ್ರೀನಗರ ವಿಮಾನ ನಿಲ್ದಾಣವು ಎಲ್ಲಾ ಪ್ರಯಾಣಿಕರು ಮತ್ತು ಪಾಲುದಾರರಿಗೆ ಸುರಕ್ಷಿತ, ಸುಭದ್ರ ಮತ್ತು ಪರಿಣಾಮಕಾರಿ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಭೂ ವೀಕ್ಷಣಾ ಉಪಗ್ರಹವನ್ನು ಹೊತ್ತೊಯ್ದ GSLV F17 ರಾಕೆಟ್ ಯಶಸ್ವಿಯಾಗಿ ಉಡಾಯಿಸಿದ ಇಸ್ರೋ

ಕಳೆದ ಮಂಗಳವಾರ ಗೋವಾದಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿರುವ ಇಂಡಿಗೋ ವಿಮಾನ 6ಇ 2102 ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಅದು ಟೇಕ್ ಆಫ್ ಆದ ಸ್ವಲ್ಪ ಸಮಯದ ಅನಂತರ ಗೋವಾದ ಮೋಪಾದಲ್ಲಿರುವ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನದಲ್ಲಿದ್ದ ಎಲ್ಲಾ 229 ಪ್ರಯಾಣಿಕರು ಸುರಕ್ಷಿತವಾಗಿದ್ದರು. ವಿಮಾನವು ಬೆಳಗ್ಗೆ 9.28 ರ ಸುಮಾರಿಗೆ ವಿಮಾನ ನಿಲ್ದಾಣದಿಂದ ಹೊರಟಿದ್ದು, ಬಳಿಕ ಎಂಜಿನ್ ದೋಷ ವರದಿಯಾದ ಹಿನ್ನೆಲೆಯಲ್ಲಿ ವಾಪಾಸ್ ನಿಲ್ದಾಣಕ್ಕೆ ಆಗಮಿಸಿ ತುರ್ತು ಲ್ಯಾಂಡಿಂಗ್ ನಡೆಸಿದೆ. ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಯಿತು.