ಟೋಲ್ ಪ್ಲಾಜಾಗಳಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಗೆ ಇಲ್ಲ ಅವಕಾಶ; ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಜಾರಿಗೆ ಮುಂದಾದ ಕೇಂದ್ರ
ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಸೇವೆಯಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಬಲಪಡಿಸುವ ಸಲುವಾಗಿ ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳನ್ನು ಸ್ಥಗಿತಗೊಳಿಸಿ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಾಗಿ ಪರಿವರ್ತಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದರಿಂದಾಗಿ ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆ ಇರುವುದಿಲ್ಲ.
ಸಂಗ್ರಹ ಚಿತ್ರ -
ನವದೆಹಲಿ: ರಾಷ್ಟ್ರೀಯ ಹೆದ್ದಾರಿ (National Highway) ಟೋಲ್ ಪ್ಲಾಜಾ (toll plazas) ಸೇವೆಗಳಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಗಳನ್ನು (cash payment) ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ. ಟೋಲ್ ಪ್ಲಾಜಾಗಳಲ್ಲಿ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯನ್ನು (digital system) ಮಾಡಲಾಗುತ್ತದೆ. ಆದ್ದರಿಂದ ಏಪ್ರಿಲ್ 1ರಿಂದ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆ ಇರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority of India) ತಿಳಿಸಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಂಪೂರ್ಣ ಡಿಜಿಟಲ್ ಟೋಲಿಂಗ್ ಪರಿಸರ ವ್ಯವಸ್ಥೆಯನ್ನು ರಚಿಸುವ ಯೋಜನೆಯ ಭಾಗವಾಗಿ ಏಪ್ರಿಲ್ 1ರಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಶುಲ್ಕ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಇದು ಜಾರಿಯಾದ ಮೇಲೆ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಅಥವಾ ಏಕೀಕೃತ ಪಾವತಿ ಇಂಟರ್ಫೇಸ್ ನಂತಹ ಡಿಜಿಟಲ್ ವಿಧಾನಗಳ ಮೂಲಕ ಮಾತ್ರ ಪಾವತಿ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.
ಬಜಾಜ್ ಜನರಲ್ ಇನ್ಶೂರೆನ್ಸ್ನಿಂದ ‘ ಎನ್ಆರ್ ಇನ್ಷೂರ್ ' ಬಿಡುಗಡೆ
ಟೋಲ್ ಪ್ಲಾಜಾಗಳಲ್ಲಿ ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಅಳವಡಿಸುವ ಮೂಲಕ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಆದಾಯ ಹೆಚ್ಚಿಸಲು, ಶುಲ್ಕ ಪ್ಲಾಜಾ ಸೇವೆಯಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆ ವೃದ್ಧಿಸುವ ಗುರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಂದಿದೆ.
ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥಯ ಅಳವಡಿಕೆಯಿಂದ ಶುಲ್ಕ ಪ್ಲಾಜಾಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಿ ಟೋಲ್ ವಹಿವಾಟುಗಳಿಗೆ ಹೆಚ್ಚಿನ ಸ್ಥಿರತೆ ಮತ್ತು ಪಾರದರ್ಶಕತೆಯನ್ನು ತರಬಹುದು. ಇದರಿಂದ ಹೆದ್ದಾರಿ ಬಳಕೆದಾರರಿಗೆ ಪ್ರಯಾಣದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.
ಕೆಲವು ವರ್ಷಗಳ ಹಿಂದೆ ಅಳವಡಿಸಲಾದ ಫಾಸ್ಟ್‌ಟ್ಯಾಗ್ ಬಳಿಕ ದೇಶದಲ್ಲಿ ಟೋಲ್ ಸಂಗ್ರಹ ಪದ್ಧತಿಯಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಪ್ರಸ್ತುತ ಹೆಚ್ಚಿನ ಟೋಲ್ ವಹಿವಾಟುಗಳು ವಾಹನಗಳಿಗೆ ಅಂಟಿಸಲಾದ RFID ಮೂಲಕ ವಿದ್ಯುನ್ಮಾನವಾಗಿ ನಡೆಯುತ್ತಿವೆ. ಇದು ಟೋಲ್ ಪ್ಲಾಜಾಗಳಲ್ಲಿ ಸುಗಮ ಮತ್ತು ಸಂಪರ್ಕ ರಹಿತ ಚಾಲನೆಗೆ ಅನುವು ಮಾಡಿಕೊಡುತ್ತದೆ.
WaterMelon: ಕಲ್ಲಂಗಡಿ ಫಸಲು ಭರ್ಜರಿ: ಗ್ರಾಹಕರಿಗೆ ಸುದ್ದಿ
ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮದ ಪ್ರಕಾರ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ತ್ವರಿತ ಡಿಜಿಟಲ್ ಪಾವತಿ ಆಯ್ಕೆಗಾಗಿ ಗ್ರಾಹಕರು ಯುಪಿಐ ಪಾವತಿ ಸೌಲಭ್ಯಗಳನ್ನು ಬಳಸಬಹುದಾಗಿದೆ. ಒಂದು ವೇಳೆ ನಗದು ರೂಪದಲ್ಲಿ ಪಾವತಿ ಮಾಡಲು ಆಯ್ದುಕೊಂಡರೆ ಬಳಕೆದಾರ ಶುಲ್ಕಕ್ಕಿಂತ ಎರಡು ಪಟ್ಟು ಹೆಚ್ಚು ಪಾವತಿಯನ್ನು ಮಾಡಬೇಕು ಎಂಬುದಾಗಿ ಹೇಳಲಾಗಿದೆ.