ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PAN Aadhaar Linking: ಆಧಾರ್- ಪ್ಯಾನ್ ಲಿಂಕ್‌ಗೆ ಡಿ.31 ಕೊನೆ ದಿನ; ಲಿಂಕ್ ಮಾಡುವ ವಿಧಾನ ಇಲ್ಲಿದೆ

PAN Aadhaar Linking: ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ ಆದಷ್ಟು ಬೇಗ ಈ ಕಾರ್ಯ ಮಾಡಿ ಮುಗಿಸಿ. ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿದೆ. ಈ ಮೊದಲು ಪ್ಯಾನ್ ಮತ್ತು ಆಧಾರ ಜೋಡಣೆ ಮಾಡುವುದಕ್ಕೆ ಸಮಯವನ್ನು ನಿಗದಿಪಡಿಸಲಾಗಿತ್ತು. ಈಗ ಅದನ್ನು ಡಿ 31, 2025 ರವರೆಗೆ ವಿಸ್ತರಿಸಲಾಗಿತ್ತು. ಈಗ ಈ ಗಡುವಿನೊಳಗೆ ನೀವು ಪ್ಯಾನ್-ಆಧಾರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ

ಆಧಾರ್- ಪ್ಯಾನ್

ನವದೆಹಲಿ: ಆಧಾರ್ ಕಾರ್ಡ್ (Aadhaar Card) ಮತ್ತು ಪ್ಯಾನ್ ಕಾರ್ಡ್ (PAN card) ಅನ್ನು 2025ರ ಡಿಸೆಂಬರ್ 31ರ ಒಳಗೆ ಲಿಂಕ್ ಮಾಡದಿದ್ದರೆ ಅಂಥವರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ತಿಳಿಸಿದೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಮಂಡಳಿಯು ಹಲವು ಬಾರಿ ವಿಸ್ತರಣೆ ಮಾಡಿದ್ದು, ಇದೀಗ ಮುಂಬರುವ ಈ ಗಡುವಿನ ಒಳಗೆ ಲಿಂಕ್ ಮಾಡದವರು ದಂಡ ಪಾವತಿಸುವ ಮೂಲಕ ಲಿಂಕ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಅಲ್ಲದೇ ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು, ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ. ಹಾಗಾಗಿ ಯಾವುದೇ ದಂಡವಿಲ್ಲದೆ ಆಧಾರ್ ಅನ್ನು ಪ್ಯಾನ್ ಜೊತೆ ಲಿಂಕ್ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 31, 2025 ಆಗಿದೆ. ಆಧಾರ್ ಜೊತೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಮುಂದಿನ ವರ್ಷದಿಂದ ನಿಷ್ಕ್ರಿಯವಾಗುತ್ತವೆ. ಪ್ಯಾನ್ ಮಾಡಲು ಆಧಾರ್ ಕಡ್ಡಾಯಗೊಳಿಸುವುದರಿಂದ ನಕಲಿ ಪ್ಯಾನ್ ಕಾರ್ಡ್‌ಗಳ ವಹಿವಾಟುಗಳನ್ನು ತಡೆಯಬಹುದಾಗಿದೆ.

ಪ್ಯಾನ್ ಆಧಾರ್ ಲಿಂಕ್ ಮಾಡುವ ವಿಧಾನ ಹೇಗೆ?

* ಮೊದಲನೆಯದಾಗಿ ಪ್ಯಾನ್ ಕಾರ್ಡ್ ಹೊಂದಿರುವವರ ಆದಾಯ ತೆರಿಗೆ www.incometax.gov.in ನ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಬೇಕು.

* ನೀವು ಇಲ್ಲಿ ನೋಂದಾಯಿಸದಿದ್ದರೆ, ಮೊದಲು ನೋಂದಾಯಿಸಿ.

* ಬಳಕೆದಾರ ಐಡಿ, ಪಾಸ್ವರ್ಡ್ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಿ.

* ನಂತರ ನಿಮ್ಮ ಮುಂದೆ ಪಾಪ್ ಅಪ್ ವಿಂಡೋ ತೆರೆದುಕೊಳ್ಳುತ್ತದೆ. ಅದರಲ್ಲಿ ಆಧಾರ್‌ಗೆ ಲಿಂಕ್ ಮಾಡಲಾದ ಪ್ಯಾನ್ ಆಯ್ಕೆಯು ಗೋಚರಿಸುತ್ತದೆ.

* ಈ ಆಯ್ಕೆಯಲ್ಲಿ, ನಿಮ್ಮ ಪ್ಯಾನ್ ಪ್ರಕಾರ, ನಿಮ್ಮ ಹೆಸರು, ಹುಟ್ಟಿದ ದಿನಾಂಕ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಈಗಾಗಲೇ ಭರ್ತಿ ಆಗಿರುತ್ತದೆ.

* ಬಳಿಕ, ವೆಬ್‌ಸೈಟ್‌ನಲ್ಲಿ ನೀಡಿರುವ ನಿಮ್ಮ ಆಧಾರ್ ಮತ್ತು ಪ್ಯಾನ್ ಮಾಹಿತಿಯನ್ನು ಪರಿಶೀಲಿಸಬೇಕು.

* ಇದರ ನಂತರ ಲಿಂಕ್ ನೌ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

* ಇಷ್ಟೆಲ್ಲಾ ಮಾಡಿದ ನಂತರ, ನಿಮಗೆ ಮೆಸೇಜ್ವೊಂದು ಬರುತ್ತದೆ, ಅದರಲ್ಲಿ ನಿಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಯಶಸ್ವಿಯಾಗಿ ಲಿಂಕ್ ಮಾಡಲಾಗಿದೆ ಎಂದು ಬರೆಯಲಾಗುತ್ತದೆ.

ಈಗಾಗಲೇ ಆಧಾರ್ ಮತ್ತು ಪ್ಯಾನ್ ಲಿಂಕ್ ಹೊಂದಿದ್ದೀರಾ ಎಂದು ಪರಿಶೀಲಿಸಿ


* ಇ-ಫೈಲಿಂಗ್ ಪೋರ್ಟಲ್ ಮುಖಪುಟದಲ್ಲಿ, 'ಕ್ವಿಕ್ ಲಿಂಕ್ಸ್' ಗೆ ಹೋಗಿ ಮತ್ತು ಲಿಂಕ್ ಆಧಾರ್ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ.

* ನಿಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಆಧಾರ್ ಸ್ಥಿತಿಯನ್ನು ವೀಕ್ಷಿಸಿ ಲಿಂಕ್ ಅನ್ನು ಕ್ಲಿಕ್ ಮಾಡಿ.

* ನಂತರ ಯಶಸ್ವಿ ಪರಿಶೀಲನೆಯ ನಂತರ, ನಿಮ್ಮ ಲಿಂಕ್ ಆಧಾರ್ ಸ್ಥಿತಿಯ ಕುರಿತು ಸಂದೇಶವನ್ನು ಪ್ರದರ್ಶಿಸಲಾಗುತ್ತದೆ.

ಈ ಸುದ್ದಿಯನ್ನು ಓದಿ: Viral News: ತನಗೆ ಕಚ್ಚಿದ ನಾಗರಹಾವಿಗೇ ಕಚ್ಚಿದ ಭೂಪ- ಸತ್ತು ಬಿದ್ದ ವಿಷಸರ್ಪ! ವಿಡಿಯೊ ನೋಡಿ

ಒಂದು ವೇಳೆ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಂಡರೆ, ನಿಮ್ಮ ಹಲವು ಪ್ರಮುಖ ಕೆಲಸಗಳು ನಿಲ್ಲುತ್ತವೆ. ಮ್ಯೂಚುವಲ್ ಫಂಡ್‌ಗಳು ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ. ಇದರ ಹೊರತಾಗಿ, ನೀವು ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ 50 ಸಾವಿರ ರೂ.ಗಿಂತ ಹೆಚ್ಚಿನ ನಗದು ಹಿಂಪಡೆಯಲು ಬ್ಯಾಂಕ್‌ನಲ್ಲಿ ಪ್ಯಾನ್ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಒಂದೇ ಬಾರಿಗೆ ಅಷ್ಟು ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ. ಇದಲ್ಲದೆ, ನೀವು ತೆರಿಗೆ ಪ್ರಯೋಜನ, ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಸಾಲದಂತಹ ಸೌಲಭ್ಯಗಳಿಂದ ವಂಚಿತರಾಗಬಹುದು.

ಇನ್ನು ಆದಾಯ ತೆರಿಗೆ ಇಲಾಖೆಯ ಪ್ರಕಾರ, ಯಾವುದೇ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳನ್ನು ಹೊಂದಲು ಅವಕಾಶವಿಲ್ಲ. ಯಾರಾದರೂ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳನ್ನು ಹೊಂದಿರುವುದು ಕಂಡುಬಂದರೆ, 10,000 ರೂ.ಗಳ ದಂಡವನ್ನು ವಿಧಿಸಬಹುದು. ಅಧಿಕೃತ ದಾಖಲೆಗಳ ಪ್ರಕಾರ, ಭಾರತವು ಮಾರ್ಚ್ 2024 ರ ವೇಳೆಗೆ 740 ದಶಲಕ್ಷಕ್ಕೂ ಹೆಚ್ಚು ಪ್ಯಾನ್ ಬಳಕೆದಾರರನ್ನು ಹೊಂದಿದ್ದು, ಅದರಲ್ಲಿ ಸುಮಾರು 605 ದಶಲಕ್ಷ ಜನರು ಈಗಾಗಲೇ ತಮ್ಮ ಆಧಾರ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ.