Union Budget 2025:ಕ್ಯಾನ್ಸರ್ ಹಾಗೂ ಇನ್ನಿತರ ಅಪರೂಪದ ಖಾಯಿಲೆಗಳ ಔಷಧಿಗಳಿಗೆ ಟ್ಯಾಕ್ಸ್ ರದ್ದು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಪ್ರಸ್ತುತ ಬಜೆಟ್ ಬಡ ಜನ, ಯುವಕರು ಮತ್ತು ಅನ್ನದಾತನನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.


ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitaraman) ಅವರು ಸಂಸತ್ತಿನಲ್ಲಿ ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಪ್ರಸ್ತುತ ಬಜೆಟ್ ಬಡ ಜನ, ಯುವಕರು ಮತ್ತು ಅನ್ನದಾತನನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇನ್ನು ಈ ಬಜೆಟ್‌ನಲ್ಲಿ(Union Budget 2025) ಹೊಸ ಆದಾಯ ತೆರಿಗೆ ವಿಧೇಯಕ ಮುಂದಿನ ವಾರ ಮಂಡನೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
Watch: Union Finance Minister Nirmala Sitharaman presents the NDA government's second full #UnionBudget2025 of its third term, and her eighth consecutive one
— IANS (@ians_india) February 1, 2025
She says, "Daycare and cancer centres in all district hospitals. Our government will facilitate setting up of daycare… pic.twitter.com/c2SEDHugPx
ಕ್ಯಾನ್ಸರ್ ಹಾಗೂ ಇನ್ನಿತರ ಅಪರೂಪದ ಖಾಯಿಲೆಗಳ ಔಷಧಿಗಳಿಗೆ ಟ್ಯಾಕ್ಸ್ ರದ್ದು ಮಾಡಲಾಗುತ್ತಿದೆ. ಕ್ಯಾನ್ಸರ್ ಹಾಗೂ ಇನ್ನಿತರ ಮಾರಣಾಂತಿಕ ಅಪರೂಪದ ಖಾಯಿಲೆಗಳಿಂದ ರಕ್ಷಿಸಬಲ್ಲ 36 ಜೀವ ರಕ್ಷಕ ಔಷಧಿಗಳನ್ನು ತೆರಿಗೆ ಮುಕ್ತ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ ಎಂದು ನಿರ್ಮಲಾ ಹೇಳಿದ್ದಾರೆ.
ಬಿಹಾರಕ್ಕೆ ಮಖಾನಾ ಮಂಡಳಿ
ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು, ಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಬಿಹಾರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಮತ್ತು ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ