ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್(Union budget 2025) ಮಂಡಿಸುತ್ತಿದ್ದಾರೆ. ಪ್ರಸ್ತುತ ಬಜೆಟ್ ಬಡ ಜನ, ಯುವಕರು ಮತ್ತು ಅನ್ನದಾತನನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇನ್ನು ಬಜೆಟ್‌ನಲ್ಲಿ ಆರಂಭದಲ್ಲಿ ನಿರ್ಮಾ ಘೋಷಣೆಗಳೇನು ಎಂಬುದನ್ನು ನೋಡೋಣ.
- ಈ ಬಜೆಟ್‌ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ
- ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ
- ಇಂಡಿಯಾ ಪೋಸ್ಟ್ ಅನ್ನು ಪ್ರಮುಖ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ
- 2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಳ
- ಎಸ್‌ಸಿ/ಎಸ್‌ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಸಾಲ ಸೌಲಭ್ಯಕ್ಕೆ ಯೋಜನೆ
- ಯೂರಿಯಾ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಸ್ಥಾಪನೆ
- ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯು 1.5 ಕೋಟಿ ಮಧ್ಯಮ ವರ್ಗದವರಿಗೆ ವೇಗದ ಪ್ರಯಾಣದ ಆಕಾಂಕ್ಷೆಗಳನ್ನು ಪೂರೈಸಲು ಅನುವು ಮಾಡಿಕೊಟ್ಟಿದೆ... ಈ ಯಶಸ್ಸಿನಿಂದ ಪ್ರೇರಿತರಾಗಿ, 120 ಹೊಸ ತಾಣಗಳಿಗೆ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಉಡಾನ್ ಯೋಜನೆಯನ್ನು ಪ್ರಾರಂಭಿಸಲಾಗುವುದು.
- ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ 10,000 ಸೀಟುಗಳು ಸೇರ್ಪಡೆ