#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Union Budget 2025: ಬಜೆಟ್‌ ಭಾಷಣ ಪ್ರಾರಂಭ ಆಗ್ತಿದ್ದಂತೆ ಪ್ರತಿಪಕ್ಷಗಳ ಗದ್ದಲ, ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಅವಧಿಯ ಎರಡನೇ ಕೇಂದ್ರ ಬಜೆಟ್‌ ಇಂದು ಮಂಡನೆಯಾಗುತ್ತಿದೆ. ಬಜೆಟ್‌ ಮಂಡನೆಗೂ ಮುನ್ನವೇ ರಾಷ್ಟ್ರಪತಿ ಭಾಷಣದ ಮೇಲೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಈ ಗದ್ದಲದ ನಡುವೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ.

ಬಜೆಟ್‌ ಭಾಷಣ ಶುರುವಾಗ್ತಿದ್ದಂತೆ ಪ್ರತಿಪಕ್ಷ ನಾಯಕರ ಸಭಾತ್ಯಾಗ!

Profile Rakshita Karkera Feb 1, 2025 11:21 AM

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಬಜೆಟ್‌ ಮಂಡನೆಯನ್ನು(Union Budget 2025) ಪ್ರಾರಂಭಿಸಿದ್ದಾರೆ. ಲೋಕಸಭೆಗೆ ಸ್ಪೀಕರ್‌ ಓಂ ಬಿರ್ಲಾ ಆಗಮಿಸುತ್ತಿದ್ದಂತೆ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿವೆ. ನಿನ್ನೆ ನಡೆದ ರಾಷ್ಟ್ರಪತಿ ದ್ರೌಪದಿ ಮರ್ಮು ಅವರ ಭಾಷಣದ ಮೇಲೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದಕ್ಕೆ ಸ್ಪೀಕರ್‌ ನಿರಾಕರಿಸಿದ್ದಾರೆ.



ಪ್ರತಿಪಕ್ಷಗಳು ಗದ್ದಲದ ನಡುವೆಯೇ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಓದಲು ಪ್ರಾರಂಭಿಸಿದರು. ಇದರಿಂದ ಪ್ರತಿಪಕ್ಷಗಳ ಗದ್ದಲ ಮತ್ತಷ್ಟು ಹೆಚ್ಚಾಗಿತ್ತು. ಕೊನೆಗೆ ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡಿದ ಘಟನೆಯೂ ನಡೆದಿದೆ. ಇನ್ನು ಬಜೆಟ್‌ ಭಾಷಣ ಆರಂಭಿಸಿದ ನಿರ್ಮಾಲಾ ಬಡತನ ನಿರ್ಮೂಲನೆಗೆ ಈ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Union Budget 2025: ಮಧುಬನಿ ಸೀರೆಯಲ್ಲಿ ಮಿಂಚಿದ ನಿರ್ಮಲಾ ಸೀತಾರಾಮನ್‌; ಇದು ಪದ್ಮ ‍ಪ್ರಶಸ್ತಿ ಪುರಸ್ಕೃತೆಯ ಗಿಫ್ಟ್‌ ಅಂತೆ!