Union Budget 2025: ಬಡ, ಮಧ್ಯಮ ವರ್ಗದ ಪ್ರಗತಿಗೆ ಕೇಂದ್ರ ಬಜೆಟ್ ಪೂರಕ: ಪ್ರಲ್ಹಾದ್ ಜೋಶಿ
Union Budget 2025: ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ, ನಾಯಕತ್ವ ಮತ್ತು ದೂರದೃಷ್ಟಿಯಿಂದಾಗಿ ಭಾರತ ಆರ್ಥಿಕವಾಗಿ ಬಹು ವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ನವದೆಹಲಿ: ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯಂತ ಸ್ಫೂರ್ತಿದಾಯಕ ಬಜೆಟ್ ಇದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ೯Union Budget 2025) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ದೆಹಲಿಯಲ್ಲಿ ಪ್ರಸಕ್ತ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ, ನಾಯಕತ್ವ ಮತ್ತು ದೂರದೃಷ್ಟಿಯಿಂದಾಗಿ ಭಾರತ ಆರ್ಥಿಕವಾಗಿ ಬಹು ವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.
NDA ಸರ್ಕಾರ, ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್ ಅನ್ನು ಪ್ರಸ್ತುತಪಡಿಸಿದೆ ಎಂದರು.
ಕೇಂದ್ರದ ಈ ಬಜೆಟ್ ಸಮೃದ್ಧ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಮುನ್ನಡೆ ಸಾಧಿಸುತ್ತಿರುವ ಭಾರತಕ್ಕೆ ಮತ್ತಷ್ಟು ಸುಭದ್ರ ಅಡಿಪಾಯ ಹಾಕಿದೆ. ಆರ್ಥಿಕತೆ ಮತ್ತು ಹೂಡಿಕೆಯಲ್ಲಿ ಗಣನೀಯ ಪ್ರಗತಿಗೆ ದಿಕ್ಸೂಚಿಯಂತಿದೆ ಎಂದರು.
ಈ ಸುದ್ದಿಯನ್ನೂ ಓದಿ | Budget 2025: 10,000 ಹೆಚ್ಚುವರಿ ವೈದ್ಯಕೀಯ ಕಾಲೇಜು ಸೀಟು; ಸಚಿವೆ ನಿರ್ಮಲಾ ಘೋಷಣೆ
ಜನರ ನಿರೀಕ್ಷೆ ಮೀರಿದ ಆಶಾದಾಯಕ ಬಜೆಟ್
2024-25ನೇ ಆರ್ಥಿಕ ವರ್ಷದ ಪ್ರಸಕ್ತ ಬಜೆಟ್‌ನಲ್ಲಿ ಮಧ್ಯಮ ವರ್ಗ, ಉದ್ಯಮ, ಕೃಷಿ, ಮೆಡಿಕಲ್ ಹೀಗೆ ಸರ್ವ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಲಾಗಿದೆ. ಇದೊಂದು ಜನರ ನಿರೀಕ್ಷೆಯನ್ನೂ ಮೀರಿದ ಅಭೂತಪೂರ್ವ ಬಜೆಟ್ ಆಗಿದೆ ಎಂದು ಹೇಳಿದರು.
ಪ್ರಮುಖವಾಗಿ 12 ಲಕ್ಷ ರೂಪಾಯಿವರೆಗೆ ಆದಾಯ ತೆರಿಗೆ ವಿನಾಯಿತಿ ಕಲ್ಪಿಸುವ ಮೂಲಕ ಮಧ್ಯಮ ವರ್ಗಕ್ಕೆ ಬಿಗ್ ಗಿಫ್ಟ್ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿ ರೈತ ವರ್ಗಕ್ಕೆ ಆಶಾದಾಯಕವಾಗಿದೆ.
ಇನ್ನು, ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯಲು ನಿರ್ಧರಿಸಿ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ ಎಂದರು.
IIT, ಮೆಡಿಕಲ್, ಆರೋಗ್ಯ, ಸಣ್ಣ ಉದ್ಯಮ ಹೀಗೆ ಸರ್ವ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಸ್ಫೂರ್ತಿದಾಯಕ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Union Budget 2025-26: 1 ಗಂಟೆ 14 ನಿಮಿಷ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್; ಇಲ್ಲಿದೆ ಅತೀ ದೀರ್ಘ, ಕಡಿಮೆ ಅವಧಿಯ ಬಜೆಟ್ ಭಾಷಣಗಳ ವಿವರ
ನವೀಕರಿಸಬಹುದಾದ ಇಂಧನಕ್ಕೆ ಉತ್ತೇಜನ
ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಗಮನಾರ್ಹ ಉತ್ತೇಜನ ನೀಡಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರದ ಅವಧಿಯ ಬಜೆಟ್‌ನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿಯ ಉತ್ಪಾದನೆಗೆ ಸಾಧಾರಣ ಸಂಪನ್ಮೂಲಗಳನ್ನು ಮೀಸಲಿಡಲಾಗುತ್ತಿತ್ತು. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ NDA ಸರ್ಕಾರ ತನ್ನ ನಿಧಿಯನ್ನು ಗಮನಾರ್ಹವಾಗಿ ವಿಸ್ತರಿಸಿದೆ ಎಂದರು.
ಒಟ್ಟಾರೆ ದೇಶದ ಸುಸ್ಥಿರತೆ, ಬೆಳವಣಿಗೆ ಮತ್ತು ಸಮೃದ್ಧಿಯೆಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಸಚಿವರು ಪ್ರತಿಪಾದಿಸಿದರು.