Union Budget 2025: ಮಧ್ಯಮ ವರ್ಗಕ್ಕೆ ಗುಡ್‌ನ್ಯೂಸ್! 12 ಲಕ್ಷದವರೆಗೆ ತೆರಿಗೆ ವಿನಾಯಿತಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಪ್ರಸ್ತುತ ಬಜೆಟ್ ಬಡ ಜನ, ಯುವಕರು ಮತ್ತು ಅನ್ನದಾತನನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಬಿಗ್ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ದೊರೆತಿದ್ದು, 12ಲಕ್ಷದವರೆಗೆ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.


ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ(Union Budget 2025) ಬಿಗ್ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ದೊರೆತಿದ್ದು, 12ಲಕ್ಷದವರೆಗೆ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ವೇತನದಾರರು, ಮಧ್ಯಮ ವರ್ಗದ ಜನರಿಗೆ ತೆರಿಗೆ ಹೊರೆ ಮತ್ತಷ್ಟು ಕಡಿಮೆಯಾದಂತಾಗಿದೆ.
ಆದಾಯ ತೆರಿಗೆದಾರರಿಗೆ ಬಜೆಟ್‌ನಲ್ಲಿ ಬಂಪರ್ ಲಾಟರಿ ಸಿಕ್ಕಿದ್ದು,12 ಲಕ್ಷದವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಬಜೆಟ್ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ: budget_speech-1